ತುಮಕೂರು: ಜಿಲ್ಲೆಯ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ಕರಡಿಗಳ ಹಾವಳಿ ಮಿತಿಮೀರಿದೆ. ಗುಂಪುಗುಂಪಾಗಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿವೆ.
ಕೊರಟಗೆರೆ ತಾಲೂಕಿನ ಹುಳಸೊಪ್ಪನಹಳ್ಳಿಯ ರಮೇಶ್ ಎಂಬುವರ ತೋಟದ ಮನೆಯ ಹತ್ತಿರ 3 ಕರಡಿಗಳು ನಿತ್ಯ ಕಾಣಿಸಿಕೊಳ್ಳುತ್ತಿದ್ದು, ರಾತ್ರಿ ವೇಳೆ ಮನೆಯಿಂದ ಹೊರಗೆ ಬಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕರಡಿಗಳನ್ನು ಜನವಸತಿ ಪ್ರದೇಶದಿಂದ ಸ್ಥಳಾಂತರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾತ್ರಿ ವೇಳೆ ಬೆಟ್ಟ ಗುಡ್ಡಗಳಿಂದ ಕೆಳಗಿಳಿದು ಮನೆಗಳ ಬಳಿ ಬರುತ್ತಿರುವ ಕರಡಿಗಳು, ಆಹಾರಕ್ಕಾಗಿ ಪರಿತಪಿಸುತ್ತಿವೆ. ಅಲ್ಲದೇ, ಜನರ ಮೇಲೆ ದಾಳಿ ಮಾಡಿ ಪರಾರಿಯಾಗುತ್ತಿರುವ ಘಟನೆಗಳು ವರದಿಯಾಗಿವೆ.
ಓದಿ: ಕುಲ್ಗಾಮ್ ಎನ್ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಭದ್ರತಾಪಡೆ