ETV Bharat / city

ತುಮಕೂರು: 21ಕ್ಕೆ ಪ್ರೀತಿ-ಗೀತಿ ಯಾಕೆ ಎಂದಿದ್ದಕ್ಕೆ ಡೀಸೆಲ್​ ಸುರಿದುಕೊಂಡು ಯುವಕ ಸಾವು - ಪ್ರೀತಿ ವಿಚಾರಕ್ಕೆ ಯುವಕ ಆತ್ಮಹತ್ಯೆ

ಈ ವಯಸ್ಸಿನಲ್ಲಿ ಪ್ರೀತಿಯಾಕೆ ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನೋರ್ವ ಕೋಪಗೊಂಡು ಮೈಮೇಲೆ ಡೀಸೆಲ್​ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

boy-committed-suicide-in-tumkur
ಯುವಕ ಸಾವು
author img

By

Published : Dec 23, 2021, 12:10 PM IST

ತುಮಕೂರು : ಪ್ರೀತಿ ಗೀತಿ ಸರಿಯಲ್ಲ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಕುಪಿತಗೊಂಡ ಯುವಕ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೊಮ್ಮಡಿಗೆರೆ ಗ್ರಾಮದಲ್ಲಿ ನಡೆದಿದೆ.

ಬಿ.ಎಂ. ಹನುಮಂತ (21) ಆತ್ಮಹತ್ಯೆಗೆ ಶರಣಾದ ಯುವಕ. ಹನುಮಂತ ಕಳೆದ ಒಂದು ವರ್ಷದಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಈ ವಯಸ್ಸಿನಲ್ಲಿ ಪ್ರೀತಿ ಗೀತಿ ಯಾಕೆ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಇದ್ರಿಂದ ಸಿಟ್ಟಿಗೆದ್ದ ಹನುಮಂತ, ಡಿ.17ರಂದು ಪಟ್ಟಣದ ಜಿಕೆಬಿಎಂಎಸ್ ಶಾಲಾ ಮೈದಾನದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ.

ಪ್ರೀತಿ ವಿಚಾರಕ್ಕೆ ಯುವಕ ಆತ್ಮಹತ್ಯೆ : ಸ್ಥಳದಲ್ಲಿದ್ದವರು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.22ರಂದು ರಾತ್ರಿ ಮೃತಪಟ್ಟಿದ್ದಾನೆ. ಈ ಸಂಬಂಧ ಹನುಮಂತನ ಪೋಷಕರು ಕುಣಿಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.