ತುಮಕೂರು: ದಿನಬಳಕೆ ವಸ್ತುವಾದ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿರುವುದನ್ನು ಖಂಡಿಸಿ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರದಲ್ಲಿ ಬಳಿ ಪ್ರತಿಭಟನೆ ನಡೆಸಲಾಯಿತು.
ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪ್ರತಿದಿನ ಬಳಸುವ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದವರಿಗೆ ಜೀವನ ನಡೆಸಲು ತೊಂದರೆ ಉಂಟು ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ದೆಹಲಿಯ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ, ಪ್ರತಿ ಸಿಲೆಂಡರ್ನ ಬೆಲೆ 145 ರೂ. ಹೆಚ್ಚಳ ಮಾಡಿದೆ. ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತ ವಹಿಸಿಕೊಂಡ ನಂತರದಲ್ಲಿ ಮಧ್ಯಮ ವರ್ಗದವರು ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಉಂಟಾಗಿದೆ. ಶೀಘ್ರವೇ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಈ ಪ್ರತಿಭಟನೆಯ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.