ETV Bharat / city

ನಾಳೆ ಸಿದ್ಧಗಂಗಾ ಮಠಕ್ಕೆ ಅಮಿತ್ ಶಾ ಭೇಟಿ.. ಕಟ್ಟುನಿಟ್ಟಿನ ಪೊಲೀಸ್ ಭದ್ರತೆ - ಕೇಂದ್ರ ವಲಯ ಐಜಿಪಿ ಚಂದ್ರಶೇಖರ್

ತುಮಕೂರು ಶ್ರೀ ಸಿದ್ಧಗಂಗಾ ಮಠಕ್ಕೆ ಕೇಂದ್ರಗೃಹ ಸಚಿವ ಅಮಿತ್​ ಶಾ ಭೇಟಿ ನೀಡುತ್ತಿರುವ ಹಿನ್ನೆಲೆ ಮಠದಲ್ಲಿ ಹಾಗೂ ಹೊರಗಡೆ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಎಲ್ಲ ರೀತಿಯ ಪೊಲೀಸ್​ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

DJP Chndrashekhar talked to press
ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಮಾಹಿತಿ ನೀಡಿದರು.
author img

By

Published : Mar 31, 2022, 5:42 PM IST

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶುಕ್ರವಾರ(ನಾಳೆ) ನಡೆಯಲಿರುವ ಪದ್ಮಭೂಷಣ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ 2000 ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಮಾಹಿತಿ ನೀಡಿದರು.

ಸಿದ್ಧಗಂಗಾ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ವರು ಎಸ್ಪಿಗಳು ಸೇರಿದಂತೆ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಗಳು ನಿಯೋಜನೆಗೊಂಡಿದ್ದಾರೆ. ಕೇಂದ್ರ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಹಾಗೂ ಭಕ್ತರು ಮಠಕ್ಕೆ ಬರಲು ಯಾವುದೇ ರೀತಿಯ ತೊಂದರೆಯಾಗದಂತೆ ಪೂರಕ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.