ETV Bharat / city

ಗುಬ್ಬಿ-ನಿಟ್ಟೂರು ಜೋಡಿ ರೈಲು ಮಾರ್ಗಕ್ಕೆ ರೈಲ್ವೆ ಸಚಿವರಿಂದ ಚಾಲನೆ - ಕೇಂದ್ರ ರೈಲ್ವೆ ಸಚಿವ ಪಿಯುಷ್ ಗೋಯಲ್

ಗುಬ್ಬಿ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್​​ ಮೂಲಕ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜ್, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

central railway minister flag off to gubbi Nittur railway
ಗುಬ್ಬಿ-ನಿಟ್ಟೂರು ಜೋಡಿ ರೈಲು ಮಾರ್ಗ
author img

By

Published : Feb 21, 2021, 8:35 PM IST

ತುಮಕೂರು: ಜಿಲ್ಲೆಯಲ್ಲಿ ಹಾದು ಹೋಗಿರೋ ಗುಬ್ಬಿ-ನಿಟ್ಟೂರು ಜೋಡಿ ರೈಲು ಮಾರ್ಗಕ್ಕೆ ರೈಲ್ವೆ ಸಚಿವ ಪಿಯುಷ್ ಗೋಯಲ್ ವರ್ಚುವಲ್​ ಮೂಲಕ ಚಾಲನೆ ನೀಡಿದರು.

ಗುಬ್ಬಿ ರೈಲ್ವೆ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್​​ ಮೂಲಕ ಚಾಲನೆ ನೀಡಲಾಯಿತು. ಸಮಾರಂಭದಲ್ಲಿ ಸಂಸದ ಜಿ.ಎಸ್.ಬಸವರಾಜ್, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ಮಾತನಾಡಿ, ಗುಬ್ಬಿ-ನಿಟ್ಟೂರು ಜೋಡಿ ಮಾರ್ಗವನ್ನು ಲೋಕಾರ್ಪಣೆ ಮಾಡಿದ ರೈಲ್ವೆ ಸಚಿವರ ನಿರ್ಧಾರ ಅಭಿನಂದನಾರ್ಹವಾಗಿದೆ. ಮೀರಜ್ ಮಾರ್ಗದ ಈ ಜೋಡಿ ಹಳಿಯು ಅರಸಿಕೆರೆವರೆಗೂ ಇನ್ನೂ 22 ಕಿ.ಮೀ. ನಿರ್ಮಾಣ ಕಾರ್ಯ ಪೂರ್ಣಗೊಂಡರೆ ಬೆಂಗಳೂರು-ಬೆಳಗಾವಿ ಮಾರ್ಗವು ರಾಜ್ಯದ ಜನತೆಗೆ ಸದ್ಬಳಕೆಯಾಗುತ್ತದೆ ಎಂದರು.

ಚಿತ್ರದುರ್ಗ-ತಿಪಟೂರು ರೈಲು ಸಂಪರ್ಕ ನಿರ್ಮಿಸಿದರೆ ತುಮಕೂರಿನವರು ಮಂಗಳೂರು, ಮೈಸೂರಿಗೆ ಹೋಗಲು ಅನುಕೂಲವಾಗುತ್ತದೆ. ಬೆಂಗಳೂರಿನಿಂದ ತುಮಕೂರಿನವರೆಗೂ ಸಬ್​ ಅರ್ಬನ್​​, ಮೆಟ್ರೋ ರೈಲು ಮಾರ್ಗವನ್ನು ವಿಸ್ತರಣೆ ಮಾಡಿದರೆ ತುಮಕೂರು-ಬೆಂಗಳೂರು ರಸ್ತೆಯ ವಾಹನ ಸಂಚಾರ ದಟ್ಟಣೆ ಕಡಿಮೆ ಆಗುವುದಲ್ಲದೆ, ಪ್ರತಿದಿನ ಪ್ರಯಾಣಿಸುವವರಿಗೆ ಪ್ರಯೋಜನವಾಗುತ್ತದೆ ಎಂದು ಸಲಹೆ ನೀಡಿದರು. ಅಲ್ಲದೆ ರೈಲ್ವೆ ಅಂಡರ್ ಪಾಸ್ ಮತ್ತು ಲೆವೆಲ್ ಕ್ರಾಸಿಂಗ್​​ನಲ್ಲಿ ಸಮಸ್ಯೆಗಳಿದ್ದು, ನಿವಾರಿಸಲು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.