ETV Bharat / city

ತುಮಕೂರು : ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ತಂಡ

author img

By

Published : Dec 18, 2021, 3:03 PM IST

ಮನೆ ಹಾನಿ ಪರಿಹಾರ ನೀಡಿರುವ ಕುರಿತು ಮಾಹಿತಿ ನೀಡಲು ಹಿಂದೇಟು ಹಾಕಿದ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ ಅವರನ್ನು ಕೇಂದ್ರದ ತಂಡ ತರಾಟೆಗೆ ತೆಗೆದುಕೊಂಡಿತು..

Central Team anger against Tumkur CEO
ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ತಂಡ

ತುಮಕೂರು : ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪರಿಹಾರ ವಿತರಣೆ ಆಗಿದೆಯೋ ಇಲ್ಲವೋ ಎಂಬುದನ್ನು ಹಾಗೂ ನಷ್ಟದ ಅಂದಾಜನ್ನು ಪರಿಶೀಲಿಸಲು ಜಿಲ್ಲೆಗೆ ಬಂದಿದ್ದ ಕೇಂದ್ರದ ತಂಡ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ ಅವರನ್ನು ತರಾಟೆಗೆ ತೆಗೆದುಕೊಂಡಿತು.

ತುಮಕೂರು ಸಿಇಒ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ತಂಡ

ಎಂ.ಹೆಚ್ ಪಟ್ಟಣದಲ್ಲಿ ಮಳೆಯಿಂದ ಮನೆ ಹಾನಿಗೊಳಗಾದ ವೆಂಕಟಲಕ್ಷ್ಮಮ್ಮ ಅವರ ಮನೆಗೆ ಭೇಟಿ ನೀಡಿದ ತಂಡ ಪರಿಹಾರ ಮಂಜೂರಾಗಿದೆಯೇ ಎಂದು ಪ್ರಶ್ನಿಸಿದರು. ಇದೇ ವೇಳೆ ಸ್ಥಳದಲ್ಲಿದ್ದ ಸಿಇಒ ವಿದ್ಯಾಕುಮಾರಿ ಈಗಾಗಲೇ ಅವರ ಖಾತೆಗೆ ಜಮಾ ಮಾಡಲಾಗಿದೆ ಎಂದು ಉತ್ತರಿಸಿದರು. ಆದರೆ, ವೆಂಕಟಲಕ್ಷ್ಮಮ್ಮ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.

ಇದರಿಂದ ಗಲಿಬಿಲಿಗೊಂಡ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಕೆ.ವಿದ್ಯಾಕುಮಾರಿ, ಸಮಜಾಯಿಷಿ ನೀಡಲು ಮುಂದಾದರು. ಅಲ್ಲದೇ ಖಾತೆಗೆ ಹಣ ಜಮಾ ಆಗಿದೆಯಾ? ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳು ವೆಂಕಟಲಕ್ಷ್ಮಮ್ಮ ಅವರಿಗೆ ತಿಳಿಸಿದರು. ಜತೆಗೆ ಕೂಡಲೇ ಸಂತ್ರಸ್ತರಿಗೆ ಪರಿಹಾರ ನೀಡಲು ಸೂಚಿಸಿದರು.

ಇದನ್ನೂ ಓದಿ: ಗಲಭೆ ಉದ್ವಿಗ್ನ.. ಮಹಾರಾಷ್ಟ್ರ-ಬೆಳಗಾವಿ ಗಡಿ ಬಂದ್​!

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.