ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರೂ ಕೂಡ ಒಂಟಿ ಮಾಡಿಲ್ಲ. ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವೇ ಇಲ್ಲ ಎಂದು ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಠಾಧೀಶರ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯನ್ನು ವ್ಯತಿರಿಕ್ತವಾಗಿ ಬಳಸಿಕೊಳ್ಳಲಾಗುತ್ತಿದೆ. ಆದರೆ, ಪಕ್ಷವು ಅವರನ್ನು ಒಂಟಿಯಾಗಿ ಮಾಡಿಲ್ಲ ಎಂದು ಹೇಳಿದರು.
ಓದಿ: ತೈಲ ಬೆಲೆ ನಿಯಂತ್ರಣಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೊಸ ಪ್ಲಾನ್..!
ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ. ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಇಲ್ಲ. ದೇವೇಗೌಡರು ಇಲ್ಲದಿದ್ದರೆ ಜೆಡಿಎಸ್ ಪಕ್ಷವಿಲ್ಲ ಎಂದು ವ್ಯಾಖ್ಯಾನಿಸಿದರು. ಮುಂದಿನ ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ನಡೆಸುತ್ತೇವೆ ಎಂದು ಕೂಡ ಇದೇ ವೇಳೆ ಅವರು ಸ್ಪಷ್ಟಪಡಿಸಿದರು.