ETV Bharat / city

'ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ' ಎಂದು ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು

author img

By

Published : Jul 22, 2022, 1:27 PM IST

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಿರಾ ಪಟ್ಟಣದ ಶ್ರೀ ದುರ್ಗಮ್ಮ ದೇವಿ ನೂತನ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು.

Siddaramaiah
ಸಿದ್ದರಾಮಯ್ಯ

ತುಮಕೂರು: ಶಿರಾ ಪಟ್ಟಣಕ್ಕೆ ಆಗಮಿಸಿದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಹೂವಿನ ಸುರಿಮಳೆಗೈದ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಮೊಳಗಿಸಿದ್ದಾರೆ.

ದಾವಣಗೆರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಿದ್ದರಾಮಯ್ಯ, ಮಾರ್ಗಮಧ್ಯೆ ಶಿರಾ ಪಟ್ಟಣದ ಶ್ರೀ ದುರ್ಗಮ್ಮ ದೇವಿ ನೂತನ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗುತ್ತಿದ್ದದ್ದು ಸಾಮಾನ್ಯವಾಗಿತ್ತು.

ಶ್ರೀ ದುರ್ಗಮ್ಮ ದೇವಿ ದೇವಾಲಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ

ಬಳಿಕ ಈಶ್ವರಪ್ಪ ವಿರುದ್ಧ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, "ನಾನು ಕೆಲಸ ಮಾಡಿದ ದುಡ್ಡು ಬರಲಿಲ್ಲ. ಈಶ್ವರಪ್ಪ ಕಮಿಷನ್​ ನೀಡುವಂತೆ ಕೇಳುತ್ತಿದ್ದಾರೆ. ಅದಕ್ಕೋಸ್ಕರ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಗುತ್ತಿಗೆದಾರ​ ಸಂತೋಷ್​ ಡೆತ್​ನೋಟ್​ನಲ್ಲಿ ಬರೆದಿದ್ದಾರೆ. ಅಲ್ಲದೆ, ನನ್ನ ಸಾವಿಗೆ ಇವರೇ ಕಾರಣ ಎಂದು ಉಲ್ಲೇಖಿಸಿದ್ದಾರೆ. ಹೀಗಿದ್ದರೂ, ಸರ್ಕಾರ ಇದನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿ ಬಿ-ರಿಪೋರ್ಟ್ ನೀಡಿದೆ" ಎಂದು ಆರೋಪಿಸಿದರು.

ಇದನ್ನೂ ಓದಿ: ಸೋನಿಯಾ ಪರ ಹೋರಾಟದಲ್ಲಿ ಭಾಗಿ: ಸಿದ್ದರಾಮಯ್ಯ ನೆರೆ ಪ್ರವಾಸ ಮುಂದೂಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.