ETV Bharat / city

ತುಮಕೂರು: ನರ್ಸಿಂಗ್​ ಕಾಲೇಜ್​​ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ - ನರ್ಸಿಂಗ್​ ಕಾಲೇಜ್​​ ವಿದ್ಯಾರ್ಥಿಗಳಿಗೆ ಕೊರೊನಾ

ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ಸೊಂಕಿತರ ಸಂಪರ್ಕಕ್ಕೆ ಬಂದಿದ್ದ, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

13861765
ಕೊರೊನಾ ಪರೀಕ್ಷೆ
author img

By

Published : Dec 9, 2021, 7:01 PM IST

ತುಮಕೂರು: ನಗರದ ವಿವಿಧ ನರ್ಸಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಸೋಂಕು ಪರೀಕ್ಷೆ ಕಾರ್ಯ ನಡೆಯುತ್ತಿದೆ.

ಖಾಸಗಿ ನರ್ಸಿಂಗ್ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿರುವ ಎಲ್ಲ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಪಟ್ಟಣದ ಸಿದ್ಧಗಂಗಾ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಒಟ್ಟು 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕಳೆದ ವಾರ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗಿ 1 ಅಥವಾ 2 ಪ್ರಕರಣಗಳು ಮಾತ್ರ ವರದಿಯಾಗಿದೆ. ಜಿಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ.

ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದರೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.