ತುಮಕೂರು: ಜಿಲ್ಲೆಯಲ್ಲಿ ಆಮ್ಲಜನಕ ತಯಾರಿಕಾ ಘಟಕ ಸ್ಥಾಪನೆ ಬಿಇಎಲ್, ರೋಟರಿ ಹಾಗೂ ವಿಪ್ರೋ ಸಂಸ್ಥೆಗಳು ಮುಂದೆ ಬಂದಿವೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ತುಮಕೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಕೋವಿಡ್-19 ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಬಿಇಎಲ್, ರೋಟರಿ, ವಿಪ್ರೋ ಸಂಸ್ಥೆಯವರು ಜಿಲ್ಲೆಯಲ್ಲಿ ಆಮ್ಲಜನಕ ಘಟಕ ಸ್ಥಾಪನೆಗೆ ಮುಂದೆ ಬಂದಿದ್ದಾರೆ. ಹಾಗಾಗಿ, ಎಲ್ಲಾ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸ್ವಯಂ ಆಮ್ಲಜನಕ ಉತ್ಪಾದನೆ ಮಾಡಿಕೊಳ್ಳಲು ಅವಕಾಶವಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಇನ್ನೂ 50 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿಕೊಡಬೇಕಿದೆ.
ಚಿಕ್ಕನಾಯಕನಹಳ್ಳಿ ಹಾಗು ಹುಳಿಯಾರಿಗೆ 50 ರಿಂದ 100 ಹಾಸಿಗೆಗಳ ಸಮುದಾಯ ಆಸ್ಪತ್ರೆ ಕೊಡಬೇಕು. ಇದರಿಂದ ಮುಂಬರುವ ಕೋವಿಡ್ ಅಲೆಯಲ್ಲಿ ಪ್ರತಿ ತಾಲೂಕಿನಲ್ಲಿಯೂ 100 ಹಾಸಿಗೆಗಳ ವ್ಯವಸ್ಥೆಯಾಗಲಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಗ್ರಹವನ್ನು ಸಮರ್ಪಕವಾಗಿ ಮಾಡಬಹುದು ಎಂದರು.
ಇದನ್ನೂ ಓದಿ: ವ್ಯಾಕ್ಸಿನ್ಗಾಗಿ ಕೆ.ಸಿ.ಜನರಲ್ ಆಸ್ಪತ್ರೆಯೆದುರು ಜನರ ಸಾಲು