ETV Bharat / city

ಕೊರೊನಾ ಸೋಂಕಿನ ಲಕ್ಷಣಗಳಿದ್ರೆ ತಕ್ಷಣ ಟೆಸ್ಟ್​ ಮಾಡಿಸಿ: ತುಮಕೂರು ಜಿಲ್ಲಾಧಿಕಾರಿ - Tumakuru news'

ಜ್ವರ, ಶೀತ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಕಂಡು ಬಂದರೆ ತಕ್ಷಣ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ತೆಗೆಯಲಾಗುತ್ತದೆ. ಸೋಂಕಿನ ಯಾವುದೇ ಲಕ್ಷಣಗಳಿರುವವರು ತಕ್ಷಣ ಆಸ್ಪತ್ರೆಗಳಿಗೆ ಬಂದು ಟೆಸ್ಟ್​ಗೆ ಒಳಗಾಗುವಂತೆ ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

Tumkur DC
ತುಮಕೂರು ಜಿಲ್ಲಾಧಿಕಾರಿ
author img

By

Published : Jun 29, 2020, 7:48 PM IST

ತುಮಕೂರು: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಗುಣಲಕ್ಷಣ ಹೊಂದಿರುವವರು ತಡವಾಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಹೀಗಾಗಿ ಸೋಂಕಿನ ಲಕ್ಷಣಗಳಿರುವವರು ತಕ್ಷಣ ಆಸ್ಪತ್ರೆಗಳಿಗೆ ಬಂದು ಟೆಸ್ಟ್​ಗೆ ಒಳಗಾಗುವಂತೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಈವರೆಗೆ ಐವರು ಮೃತಪಟ್ಟಿದ್ದಾರೆ. ಇವರೆಲ್ಲರೂ ತಡವಾಗಿ ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ದರಿಂದ ಜ್ವರ, ಶೀತ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಕಂಡು ಬಂದ ತಕ್ಷಣ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆಯಬೇಕು. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಗಂಟಲು ದ್ರವದ ಮಾದರಿ ತೆಗೆಯಲಾಗುತ್ತದೆ ಎಂದಿದ್ದಾರೆ.

ತುಮಕೂರು ಜಿಲ್ಲಾಧಿಕಾರಿ

ಇದುವರೆಗೂ ತುಮಕೂರು ಜಿಲ್ಲೆಯಲ್ಲಿ 93 ಸೋಂಕಿತ ವ್ಯಕ್ತಿಗಳು ಕಂಡು ಬಂದಿದ್ದಾರೆ. ಅದರಲ್ಲಿ ಅತಿ ಹೆಚ್ಚು ತುಮಕೂರು, ಶಿರಾ ಮತ್ತು ಪಾವಗಡ ತಾಲೂಕುಗಳಲ್ಲಿ ಕಂಡು ಬಂದಿದೆ. ಮುಂಬರುವ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಜನರು ಸೋಂಕಿನ ಲಕ್ಷಣ ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.