ತುಮಕೂರು : ನಗರದ ಅರುಣ ನರ್ಸಿಂಗ್ ಕಾಲೇಜಿನಲ್ಲಿ ಮತ್ತೆ 3 ಕೋವಿಡ್ ಪ್ರಕರಣ ದೃಢಪಟ್ಟಿವೆ. ಜಿಲ್ಲೆಯಲ್ಲಿನ ಕ್ಲಸ್ಟರ್ಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಕೇರಳದಿಂದ ಬಂದಿದ್ದ ಮೂವರು ವಿದ್ಯಾರ್ಥಿನಿಯರಲ್ಲಿ ಕೋವಿಡ್ ಸೋಂಕು ದೃಢಪಡುವುದರೊಂದಿಗೆ 3 ನರ್ಸಿಂಗ್ ಕಾಲೇಜಿಗಳಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಈ ಹಿಂದೆ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8, ವರದರಾಜ ಕಾಲೇಜಿನಲ್ಲಿ 7 ಪ್ರಕರಣ ವರದಿಯಾಗಿದ್ದವು. ಇದರಿಂದ ಕಾಲೇಜು ಮತ್ತು ಹಾಸ್ಟೆಲ್‌ಗಳು ಮುಚ್ಚಲ್ಪಟ್ಟಿದ್ದವು. ಅಲ್ಲದೇ, ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ ಬಿ ನಾಗೇಂದ್ರಪ್ಪ ಪ್ರತಿಕ್ರಿಯಿಸಿ, 650 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 40 ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ.
ಪೆರುಮನಹಳ್ಳಿಯಲ್ಲಿ 11 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಆ ಹಳ್ಳಿಯನ್ನು ಕಂಟೇನ್ಮೆಂಟ್ ವಲಯ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Omicron fear.. 2ನೇ ಡೋಸ್ ಹಾಕಿಕೊಳ್ಳದ ಜನರಿಗೆ ಮನವರಿಕೆ ಮಾಡ್ತಿರುವ ತುಮಕೂರು ಜಿಲ್ಲಾಧಿಕಾರಿ..