ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಕೆರೆಗಳ ಪಾಳ್ಯ ಸಮೀಪ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದವರನ್ನು ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಗಮನಿಸಿ ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಘಟನೆ ಹಿನ್ನೆಲೆ: ಜಿ.ಪರಮೇಶ್ವರ್ ಅವರು ನಿನ್ನೆ(ಶುಕ್ರವಾರ) ರಾತ್ರಿ ಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಗೊಂದಿಹಳ್ಳಿ, ಕೋಡ್ಲಾಪುರ ಸುತ್ತಮುತ್ತ ಕ್ಷೇತ್ರ ಪ್ರವಾಸ ಮುಗಿಸಿ ತುಮಕೂರಿಗೆ ತೆರಳುತ್ತಿದ್ದರು. ಈ ವೇಳೆ, ಮಧುಗಿರಿ- ಕೊರಟಗೆರೆ ಮಾರ್ಗದ ಕೆರೆಗಳ ಪಾಳ್ಯ ಸಮೀಪದ ರಸ್ತೆಯಲ್ಲಿ ದ್ವಿಚ್ರಕ್ರ ವಾಹನ ಅಪಘಾತಕ್ಕೀಡಾಗಿತ್ತು. ಅದೇ ಮಾರ್ಗದಲ್ಲಿ ಚಲಿಸುತಿದ್ದ ಡಾ.ಜಿ ಪರಮೇಶ್ವರ್ ತಮ್ಮ ವಾಹನವನ್ನು ನಿಲ್ಲಿಸಿ ಗಾಯಾಳುಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 8 ಮಂದಿ ದುರ್ಮರಣ