ತುಮಕೂರು: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ. 24 ವರ್ಷದ ಸೋಹನ್ ನಾಥ್ ಬಾಲಂಕರ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. 6ನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸೋಹನ್ ರೂಮಿನಲ್ಲಿ ಹಲವು ಔಷಧಿಗಳು, ಮಾತ್ರೆ ಲೇಬಲ್ಗಳು ಪತ್ತೆಯಾಗಿವೆ.
ಮಹಾರಾಷ್ಟ್ರದ ಶಾಸ್ತ್ರಿನಗರ ಮೂಲದ ಸೋಹನ್ ನಾಥ್ ಬಾಲಂಕರ್ ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದನು. ಸೋಮವಾರ ಸಂಜೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಎನ್ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಈಜು ಬಾರದಿದ್ದರೂ ಸಮುದ್ರಕ್ಕೆ ಹಾರಿ ಹುಚ್ಚಾಟ : ನೋಡ ನೋಡುತ್ತಿದ್ದಂತೆ ಓರ್ವ ಸಾವು