ತುಮಕೂರು: ಸರ್ಕಾರದ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಅದನ್ನು ಪಾಲಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಎಂದು ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ. ವೀರಭದ್ರಯ್ಯ ಅಭಿಪ್ರಾಯ ಪಟ್ಟಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಹುಟ್ಟುತ್ತಿರುವ ಮಕ್ಕಳಲ್ಲಿನ ಅಂತರದ ಬಗ್ಗೆ ಅರಿವು ಮೂಡಿಸುವ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರಿಗೆ ತಿಳಿಹೇಳುವ ಕಾರ್ಯ ಪ್ರಮುಖ ಪಾತ್ರ ವಹಿಸುತ್ತದೆ, ಇಲ್ಲವಾದಲ್ಲಿ ಹುಟ್ಟುವ ಮಕ್ಕಳನ್ನು ಸರಿಯಾಗಿ ಪೋಷಿಸಲಾಗದೆ, ಮಕ್ಕಳಲ್ಲಿನ ಬೆಳವಣಿಗೆ ಕುಂಠಿತವಾಗುವುದರಿಂದ ಸಮಾಜಕ್ಕೆ ತೊಂದರೆಯಾಗುತ್ತದೆ. ಇದನ್ನು ಅರಿತ ಭಾರತ ಸರ್ಕಾರ, ಅನೇಕ ಯೋಜನೆಗಳನ್ನು ರೂಪಿಸಿದೆ ಈ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗುತ್ತವೆ ಹಾಗೂ ಮುಂದಿನ ಪೀಳಿಗೆಯ ಮಕ್ಕಳು ಆರೋಗ್ಯಯುಕ್ತರಾಗುತ್ತಾರೆ ಎಂದು ಡಾ. ವೀರಭದ್ರಯ್ಯ ತಿಳಿಸಿದರು.
ಇದೇ ವೇಳೆ ಹೆಚ್ಚಿನದಾಗಿ ಸೇವೆಸಲ್ಲಿಸಿದ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಗುರುತಿಸಿ ಬಹುಮಾನ ನೀಡುವ ಮೂಲಕ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಚಂದ್ರಿಕಾ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ, ಎನ್ಜೆಂಡರ್ ಹೆಲ್ತ್ ಸಂಸ್ಥೆಯ ರಾಜ್ಯ ಯೋಜನಾ ಸಂಯೋಜನಾಧಿಕಾರಿ ಡಾ. ಧನ್ಯಕುಮಾರ್ ಇತರರು ಹಾಜರಿದ್ದರು.