ETV Bharat / city

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಇಬ್ಬರಿಗೆ ಗಾಯ - ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ ತುಮಕೂರು ನಗರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

fight between two groups for trivial reason: two for serious injury
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ:ಇಬ್ಬರಿಗೆ ತೀವ್ರತರ ಗಾಯ
author img

By

Published : Feb 20, 2022, 11:43 AM IST

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿರುವ ಘಟನೆ ತುಮಕೂರು ನಗರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.

ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಲಾಗಿದ್ದು, ಗಾಯಗೊಂಡವರನ್ನು ಮೆಹಬೂಬ್ ಪಾಷಾ (34) ಮತ್ತು ಇದಾಯತ್ ಎಂದು ಗುರುತಿಸಲಾಗಿದೆ. ಇಬ್ಬರನ್ನು ತುಮಕೂರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಣದ ವ್ಯವಹಾರದಲ್ಲಿ ಮನಸ್ತಾಪ ಬಂದು ನಡೆದ ಗಲಾಟೆ ನಡೆದಿದೆ ಎಂದು ದೂರಲಾಗಿದೆ. ಮುಂಗೈ, ಹೊಟ್ಟೆ, ಮುಖಕ್ಕೆ ಮಚ್ಚಿನೇಟು ಬಿದ್ದಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳು ಮೆಹಬೂಬ್ ಪಾಷಾನನ್ನು ಬೆಂಗಳೂರಿನ ನಿಮಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಜಾಗತಿಕವಾಗಿ 422 ಮಿಲಿಯನ್ ತಲುಪಿದ ಕೋವಿಡ್ ಪ್ರಕರಣಗಳ ಸಂಖ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.