ETV Bharat / city

ಪಾವಗಡ ಬಸ್ ದುರಂತ : ಮೃತರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ನೀಡಲು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ - ಬಸ್​ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಪರಿಹಾರ

ಅಪಘಾತಕ್ಕೀಡಾದ ಬಸ್​​ನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ಬಸ್‌ನ ಟಾಪ್‌ ಮೇಲೂ ಜನ ಕೂತಿದ್ದರು. ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜನ ಹೆಚ್ಚಿದ್ದರೂ ಈ ಮಾರ್ಗದಲ್ಲಿ ಬಸ್​ಗಳ ಸಂಚಾರ ಸರಿಯಾಗಿಲ್ಲ. ಸಾರಿಗೆ ಅಧಿಕಾರಿಗಳ ಉಪೇಕ್ಷೆ ಖಂಡನೀಯ. ಇದು ಅನಾಹುತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ..

kumaraswamy
ಕುಮಾರಸ್ವಾಮಿ
author img

By

Published : Mar 20, 2022, 3:02 PM IST

ಬೆಂಗಳೂರು : ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ನಡೆದ ಬಸ್​ ದುರಂತದಲ್ಲಿ ಅಸುನೀಗಿದವರಿಗೆ ಸರ್ಕಾರ ಘೋಷಿಸಿದ 5 ಲಕ್ಷ ರೂ. ಪರಿಹಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರ ಮೃತರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ನಿರ್ಲಕ್ಷ್ಯವೇ ಕಾರಣ. ಎಷ್ಟೋ ಕನಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವಗಳು ಬಲಿಯಾಗಿವೆ. ಮುಖ್ಯಮಂತ್ರಿಗಳು ಈ ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ದೊಡ್ಡ ಮೊತ್ತದ ಪರಿಹಾರ ಘೋಷಿಸಬೇಕು.

ಮೃತ ಕುಟುಂಬಗಳ ಜೀವನೋಪಾಯಕ್ಕೆ ನೆರವು ನೀಡಬೇಕು ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ. ಗಾಯಾಳುಗಳನ್ನು ಬೆಂಗಳೂರು, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಅವರಿಗೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ವರದಿಗಳು ಬೆಳಗ್ಗೆಯಿಂದಲೂ ಮಾಧ್ಯಮಗಳಲ್ಲಿ ಬರುತ್ತಿವೆ. ಸರ್ಕಾರ ಕೂಡಲೇ ತುರ್ತು ಗಮನ ಹರಿಸಿ, ಓರ್ವ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಬೇಕು. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಲೂಕಿನ ಶೇ.25 ಗ್ರಾಮಗಳಿಗೆ ಬಸ್​ ಇಲ್ಲ : ಪಾವಗಡ ಹಿಂದುಳಿದಿರುವ ಗಡಿ ತಾಲೂಕಾಗಿದೆ. ಈ ಭಾಗದ ಜನರು ಸೂಕ್ತ ಸಾರಿಗೆ ಸೌಕರ್ಯ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ತಾಲೂಕಿನ ಶೇ.25ರಷ್ಟು ಗ್ರಾಮಗಳಿಗೆ ಬಸ್‌ ಸಂಪರ್ಕವೇ ಇಲ್ಲ ಎಂಬ ಆರೋಪವಿದೆ. ಸರ್ಕಾರ ಕೂಡಲೇ ಈ ಎಲ್ಲ ಗ್ರಾಮಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಪಘಾತಕ್ಕೀಡಾದ ಬಸ್​​ನಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ಬಸ್‌ನ ಟಾಪ್‌ ಮೇಲೂ ಜನ ಕೂತಿದ್ದರು. ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜನ ಹೆಚ್ಚಿದ್ದರೂ ಈ ಮಾರ್ಗದಲ್ಲಿ ಬಸ್​ಗಳ ಸಂಚಾರ ಸರಿಯಾಗಿಲ್ಲ. ಸಾರಿಗೆ ಅಧಿಕಾರಿಗಳ ಉಪೇಕ್ಷೆ ಖಂಡನೀಯ. ಇದು ಅನಾಹುತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ದುರಂತಕ್ಕೆ ಆರ್‌ಟಿಒ ಅಧಿಕಾರಿಗಳ ನಿರ್ಲಕ್ಷ್ಯದ ಜತೆಗೆ ಪಾವಗಡದಲ್ಲಿ ಬಸ್‌ ಡಿಪೋ ಇದ್ದರೂ ಸೂಕ್ತ ಬಸ್‌ ವ್ಯವಸ್ಥೆ ಮಾಡದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉಪೇಕ್ಷೆಯೂ ಎದ್ದು ಕಾಣುತ್ತದೆ. ಸರ್ಕಾರ ಸೂಕ್ತ ತನಿಖೆ ನಡೆಸಿ ಕರ್ತವ್ಯಲೋಪ ಎಸಗಿರುವ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.