ETV Bharat / city

ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿ ಬಿ ಜಯಚಂದ್ರ, ವಿಕ್ರಮ್​ ಆಸ್ಪತ್ರೆಗೆ ದಾಖಲು - ತುಮಕೂರು ಬಳಿ ಟಿಬಿ ಜಯಚಂದ್ರ ಕಾರು ಅಪಘಾತ

ತುಮಕೂರು ತಾಲೂಕಿನಲ್ಲಿ ಹಾದುಹೋಗಿರೋ ರಾಷ್ಟ್ರೀಯ ಹೆದ್ದಾರಿ 4ರ ಸಿಬಿ ಕ್ರಾಸ್ ಬಳಿ ಮಾಜಿ ಸಚಿವ ಟಿ ಬಿ ಜಯಚಂದ್ರ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Former Minister TB Jayachandra car accident
ಕಾರು ಅಪಘಾತ: ಪ್ರಾಣಾಪಾಯದಿಂದ ಪಾರಾದ ಮಾಜಿ ಸಚಿವ ಟಿಬಿ ಜಯಚಂದ್ರ, ವಿಕ್ರಮ್​ ಆಸ್ಪತ್ರೆಗೆ ದಾಖಲು
author img

By

Published : Apr 20, 2022, 8:51 AM IST

ತುಮಕೂರು: ಮಾಜಿ ಸಚಿವ ಟಿ ಬಿ ಜಯಚಂದ್ರ ಅವರು ಸಂಚರಿಸುತ್ತಿದ್ದ ಕಾರು ಅಪಘಾತವಾಗಿದ್ದು ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ತಾಲೂಕಿನಲ್ಲಿ ಹಾದುಹೋಗಿರೋ ರಾಷ್ಟ್ರೀಯ ಹೆದ್ದಾರಿ 4ರ ಸಿಬಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಫಾರ್ಚೂನರ್ ಕಾರು ರಸ್ತೆ ಬದಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಗನ್​​ಮ್ಯಾನ್​ಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡಿರುವ ಟಿ ಬಿ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಈ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿಗ್ಗಾವಿಯಲ್ಲಿ ಕೆಜಿಎಫ್​-2 ಸಿನಿಮಾ ವೀಕ್ಷಣೆ ವೇಳೆ ಗುಂಡು ಹಾರಿಸಿದ ದುಷ್ಕರ್ಮಿ.. ಓರ್ವನಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.