ತುಮಕೂರು: ವಿಧಾನ ಪರಿಷತ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮೇಲ್ಮನೆಯಲ್ಲಿ ಬಹುಮತ ಸಾಧಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. 25 ಸ್ಥಾನಗಳಲ್ಲಿ 15 ಕ್ಕೂ ಹೆಚ್ಚು ಸ್ಥಾನವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಕೆಲವು ಭಾಗದಲ್ಲಿ ಅಭ್ಯರ್ಥಿಗಳನ್ನು ಲೆಕ್ಕಾಚಾರ ಮಾಡಿ ಕಣಕ್ಕಿಳಿಸಲಾಗಿದೆ ಎಂದರು.
ಬೆಲೆ ಏರಿಕೆ, ಆಡಳಿತ ವಿರೋಧಿ ಅಲೆಯಿಂದ ಜನರು ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರು, ಧಾರವಾಡ, ವಿಜಯಪುರ, ಮಂಗಳೂರಿನಲ್ಲಿ ಅತಿ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ತುಮಕೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಹೆಚ್ಚು ಪ್ರಾಶಸ್ತ್ಯ ಲಭಿಸಲಿದೆ ಎಂದು ಹೇಳಿದರು.