ತುಮಕೂರು: ಬೇರೆ ದೇಶಗಳಿಂದ ಪ್ರತಿಕ್ರಿಯೆ ಬರುವ ಮೊದಲು ಪ್ರವಾದಿ ವಿರುದ್ಧದ ಹೇಳಿಕೆಗೆ ಬಿಜೆಪಿ ಅದಕ್ಕೆ ಸ್ಪಷ್ಟನೆ ಕೊಡಬೇಕಿತ್ತು. ಈಗ ಆ ಹೇಳಿಕೆಯಿಂದ ನಾವು ದೂರ ಇದ್ದೇವೆ ಎನ್ನುತ್ತಾರೆ. ಇವತ್ತು ಭಾರತದ ಗೌರವವನ್ನು ಹರಾಜು ಹಾಕುವ ಸ್ಥಿತಿಗೆ ಬಂದಂತಾಗಿದೆ. ಬಿಜೆಪಿ ಸರ್ಕಾರ ನಮ್ಮ ದೇಶವನ್ನು ಪ್ರತಿನಿಧಿಸುತ್ತಿದೆ. ಹಾಗಾಗಿ ಬಿಜೆಪಿಯೇ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ ದೇಶಗಳಿಂದ ಬೆದರಿಕೆ ಬರುತ್ತಿದೆ. ಆಲ್ ಖೈದಾದವರು ನಾವು ಮತ್ತೆ ನಮ್ಮ ಚಟುವಟಿಕೆ ಶುರು ಮಾಡುತ್ತೇವೆ ಎಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ನೇರವಾದ ಕಾರಣ ಎಂದು ದೂರಿದರು.
ಬಿಜೆಪಿ ವಕ್ತಾರರಾಗಿದ್ದ ನೂಪೂರ್ ಶರ್ಮಾ ಚಾನಲ್ವೊಂದರ ಸಂದರ್ಶನದಲ್ಲಿ ಕಳೆದ ತಿಂಗಳು ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದರು. ಇದು ವಿವಾದದ ಕಿಚ್ಚು ಹೊತ್ತಿಸಿದ ಹಿನ್ನೆಲೆ ಬಿಜೆಪಿಯಿಂದ ಅವರನ್ನು ಇತ್ತೀಚೆಗೆ ಉಚ್ಚಾಟನೆ ಮಾಡಲಾಗಿದೆ.
ಇದನ್ನೂ ಓದಿ: 2ನೇ ಅಭ್ಯರ್ಥಿ ಗೆಲುವಿನ ಚರ್ಚೆಗೆ ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ