ತುಮಕೂರು: ಇತ್ತೀಚೆಗೆ ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ತುಮಕೂರು ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಖಾಸಗಿ ಬಸ್ಗಳು ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ. ವಾಣಿಜ್ಯ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಆಟೋಗಳ ಸಂಚಾರ ಕೂಡ ಸ್ಥಗಿತಗೊಂಡಿದೆ. ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಉಂಟಾಗಿಲ್ಲ.
ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ: ನಾಳೆ ತುಮಕೂರು ಬಂದ್ಗೆ ಕರೆ
ಬಜರಂಗದಳದ ಕಾರ್ಯಕರ್ತ ಭಾರ್ಗವ ಹಾಗೂ ಕಿರಣ್ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು.
ಅಕ್ಟೋಬರ್ 19ರಂದು ಸಂಜೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ದುಷ್ಕರ್ಮಿಗಳು ಇಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪದ ಮೇರೆಗೆ ಸದ್ಯ ಐವರನ್ನು ಬಂಧಿಸಲಾಗಿದೆ.