ETV Bharat / city

'ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಯಿಂದ ಮಕ್ಕಳನ್ನು ಮಾದರಿ ಶಾಲೆಗೆ ಕರೆತರಲು ಚಿಂತನೆ' - minsiter BC Nagesh

ಕಡಿಮೆ ಮಕ್ಕಳಿರುವ ಶಾಲೆಗಳಿಂದ ಮಕ್ಕಳನ್ನು ಮಾದರಿ ಶಾಲೆಗೆ ಕರೆದುಕೊಂಡು ಬರಲು ಸರ್ಕಾರ ಚಿಂತನೆ ನಡೆಸಿದೆ. ಇದರ ಮೊದಲ ಹಂತವಾಗಿ ತಿಪಟೂರಿನಲ್ಲಿ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

government-thinking-to-bring-students-to-model-school
ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಯಿಂದ ಮಕ್ಕಳನ್ನು ಮಾದರಿ ಶಾಲೆಗೆ ಕರೆತರಲು ಸರ್ಕಾರ ಚಿಂತನೆ : ಬಿ.ಸಿ ನಾಗೇಶ್
author img

By

Published : May 3, 2022, 8:20 AM IST

Updated : May 3, 2022, 8:39 AM IST

ತುಮಕೂರು: ಸರ್ಕಾರವು 13,000ಕ್ಕೂ ಹೆಚ್ಚು ಶಾಲೆಗಳನ್ನು ನಡೆಸುತ್ತಿದೆ. ಅವುಗಳ ಪೈಕಿ ಅನೇಕ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ತಿಪಟೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ನಿಯಮದ ಪ್ರಕಾರ, 30 ಮಕ್ಕಳಿಗೆ ಓರ್ವ ಶಿಕ್ಷಕನನ್ನು ನಿಯೋಜಿಸಬೇಕು. ಆದರೂ 10 ಮಕ್ಕಳಿಗೆ ಓರ್ವ ಶಿಕ್ಷಕನನ್ನು ಸರ್ಕಾರ ನೀಡುತ್ತಿದೆ ಎಂದರು.

ಹೀಗಾಗಿ, ಇತರ ಶಾಲೆಗಳಿಗೆ ಪೂರಕವಾಗಿ ಶಿಕ್ಷಕರನ್ನು ನೀಡಲು ಸಾಧ್ಯವಾಗುತ್ತಿಲ್ಲ. 10ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳಿಂದ ಮಾದರಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಬರುವ ಚಿಂತನೆ ಮಾಡಲಾಗಿದೆ. ಇದರ ಮೊದಲ ಹಂತವಾಗಿ ಪ್ರಾಯೋಗಿಕವಾಗಿ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆನರಾ ಬ್ಯಾಂಕ್ ಸಹಕಾರದೊಂದಿಗೆ ಕಡಿಮೆ ಮಕ್ಕಳಿರುವ ಶಾಲೆಯಿಂದ ಮಕ್ಕಳನ್ನು ಮಾದರಿ ಶಾಲೆಗೆ ಕರೆತರುವ ಕೆಲಸ ಆರಂಭಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲೂ ಅಕ್ರಮ, ಮತ್ತೋರ್ವನ ಬಂಧನ

Last Updated : May 3, 2022, 8:39 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.