ತುಮಕೂರು: ತುಮಕೂರಿನ ಖಾಸಗಿ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಉಪನ್ಯಾಸಕಿ ಚಾಂದಿನಿ ಎಂಬುವರು ರಾಜೀನಾಮೆ ನೀಡಿದ್ದಾರೆ. ಹಿಜಾಬ್ ಧರಿಸದೆ ಪಾಠ ಮಾಡುವಂತೆ ಸೂಚಿಸಿದ್ದಾರೆ ಎಂದು ಉಪನ್ಯಾಸಕಿ ಆರೋಪ ಮಾಡಿದ್ದಾರೆ. ಇದೇ ಕಾರಣಕ್ಕೆ ಕೆಲಸಕ್ಕೆ ರಿಸೈನ್ ಮಾಡಿದ್ದೇನೆ ಎಂದಿದ್ದಾರೆ.
ಕಳೆದ ಮೂರು ವರ್ಷಗಳಿಂದ ತುಮಕೂರು ನಗರದ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಹಿಜಾಬ್ ತೆಗೆದು ಪಾಠ ಮಾಡಬೇಕೆಂದು ತಿಳಿಸಿದರು. ಹೀಗಾಗಿ ಇದು ನನ್ನ ಗೌರವಕ್ಕೆ ಧಕ್ಕೆ ಬರಲಿದೆ ಎಂಬ ಉದ್ದೇಶದಿಂದ ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಅತಿಥಿ ಉಪನ್ಯಾಸಕಿ ಚಾಂದಿನಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ. ಆದ್ರೆ ಈಗಾಗಲೇ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿ, ಯಾವುದೇ ಧಾರ್ಮಿಕ ಸಂಬಂಧಿತ ವಸ್ತ್ರ ಧರಿಸಿ ಕಾಲೇಜಿಗೆ ಹೋಗುವಂತಿಲ್ಲ ಎಂದು ತಿಳಿಸಿದೆ. ಆದ್ರೆ ಕೆಲವೆಡೆ ಹಿಜಾಬ್ಗೆ ಅವಕಾಶ ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸುತ್ತಿದ್ದಾರೆ.
ಇದನ್ನೂ ಓದಿ: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್ಗೂ ನಿರ್ಬಂಧ!