ತುಮಕೂರು: ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮುಂಗಾರುಪೂರ್ವ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿಯೂ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡು ವಾಹನ ಸವಾರರು ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
ಜಿಲ್ಲೆಯ ಬಹುತೇಕ ಹಳ್ಳಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಕುಣಿಗಲ್, ತಿಪಟೂರು, ಗುಬ್ಬಿ, ಮಧುಗಿರಿ, ತುರುವೇಕೆರೆ ತಾಲೂಕಿನಾದ್ಯಂತ ಮಳೆರಾಯ ಸಮಸ್ಯೆ ಸೃಷ್ಟಿಸಿದ್ದಾನೆ. ಕೆಲ ಜಮೀನುಗಳಿಗೆ ನೀರು ನುಗ್ಗಿದ್ದು ಬೆಳೆ ನಾಶವಾಗಿದೆ. ಕುಣಿಗಲ್ ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಗ್ರಾಮೀಣ ಭಾಗದ ಕೆಲ ಶಾಲೆಗಳಿಗೆ ರಜೆ ನೀಡಲಾಗಿದೆ.
ಇದನ್ನೂ ಓದಿ: ವಿಧಾನಮಂಡಲ ಸದಸ್ಯರ ವೇತನ ಪರಿಷ್ಕರಣೆ: ಶಾಸಕರ ಮಾಸಿಕ ವೇತನ 2.05 ಲಕ್ಷ ರೂ.