ETV Bharat / city

ತುಮಕೂರು ಬಸ್‌ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಆರಗ ಜ್ಞಾನೇಂದ್ರ - tumkur bus accident

ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಬಸ್​ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು.

home minister Araga Jnanendra visits tumkur govt hospital
ತುಮಕೂರು ಆಸ್ಪತ್ರೆಗೆ ಸಚಿವ ಆರಗ ಜ್ಞಾನೇಂದ್ರ ಭೇಟಿ
author img

By

Published : Mar 20, 2022, 11:48 AM IST

Updated : Mar 20, 2022, 12:02 PM IST

ತುಮಕೂರು: ಜಿಲ್ಲೆಯ ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಬಸ್​​ ಮೇಲ್ಭಾಗದಲ್ಲಿ ಕುಳಿತು ಪ್ರಯಾಣಿಸುತ್ತಿದ್ದವರೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಓವರ್‌ಲೋಡ್ ಆಗಿದ್ದಕ್ಕೆ ಅಪಘಾತ ಸಂಭವಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳನ್ನು ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚವನ್ನೂ ಭರಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 1 ಲಕ್ಷ ರೂ. ನೀಡಿದ ಸಚಿವ ಶ್ರೀರಾಮುಲು

ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಖಾಸಗಿ ಬಸ್ ಮಾಲೀಕ ನಾಪತ್ತೆಯಾಗಿದ್ದಾನೆ ಎಂದರು.

Last Updated : Mar 20, 2022, 12:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.