ತುಮಕೂರು: ಮಾರ್ಚ್ 25ರಂದು ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ ಹಾಲಿ ಸಂಸದ ಮುದ್ದಹನುಮೇಗೌಡ ತಿಳಿಸಿದ್ದಾರೆ.
ತಾಲೂಕಿನ ಹೆಬ್ಬೂರು ಗ್ರಾಮದಲ್ಲಿರುವ ಮುದ್ಧನುಮೇಗೌಡರ ತೋಟದಲ್ಲಿ ಕರೆಯಲಾಗಿದ್ದ ಅಭಿಮಾನಿಗಳ ಸಭೆಯ ನಂತರ ಮಾತನಾಡಿದ ಅವರು, ತುಮಕೂರು ನಗರದ ಟೌನ್ಹಾಲ್ ಬಳಿಯಿಂದ ಬೃಹತ್ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಹಾಲಿ ಸಂಸದರಿಗೆ ಟಿಕೆಟ್ ಕೊಡಡಿರುವುದು ಮೈತ್ರಿ ಧರ್ಮದ ಪಾಲನೆ ಮಾಡದಂತಾಗಿದೆಯೇ. ನನ್ನನ್ನು ನೆಲದ ಮೇಲೆ ಕೆಡವಲಾಗಿದೆ. ನನಗೆ ಟಿಕೆಟ್ ನಿರಾಕರಿಸಿರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿದರು.
ಇನ್ನು ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಾಯಿಸಿದರು.