ETV Bharat / city

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುತ್ತೇವೆ- ಐಜಿಪಿ - ತುಮಕೂರು ಹಲ್ಲೆ ಪ್ರಕರಣ

ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಆರೋಪಿಗಳನ್ನು ಕೆಲವೇ ಗಂಟೆಗಳಲ್ಲೇ ಬಂಧಿಸುತ್ತೇವೆ. ನಮಗೆ ಎಲ್ಲ ಸಾಕ್ಷ್ಯಗಳೂ ಸಿಕ್ಕಿವೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

IGP Chandrashekar
ಐಜಿಪಿ ಚಂದ್ರಶೇಖರ್
author img

By

Published : Oct 20, 2021, 11:08 AM IST

Updated : Oct 20, 2021, 12:03 PM IST

ತುಮಕೂರು: ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲೇ ಬಂಧಿಸುತ್ತೇವೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಐಜಿಪಿ ಚಂದ್ರಶೇಖರ್

ನಿನ್ನೆ ರಾತ್ರಿಯೇ ಐಜಿಪಿ ತುಮಕೂರು ನಗರಕ್ಕೆ ಬಂದು ಮಧ್ಯರಾತ್ರಿವರೆಗೂ ಗಸ್ತು ತಿರುಗಿದ್ದಾರೆ.

ಬೈಕ್ ವ್ಹೀಲಿಂಗ್ ಮಾಡೋಕೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಎಸ್ಪಿ ಕಚೇರಿಯಲ್ಲಿ 20 ನಿಮಿಷಕ್ಕೂ ಹೆಚ್ಚು ಕಾಲ ಪೊಲೀಸರೊಂದಿಗೆ ಚರ್ಚೆ ನಡೆಸಿದ್ದೇವೆ. ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಘಟನೆಯ ವಿವರ:

ನಿನ್ನೆ ಸಂಜೆ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ನಂತರ ಅವರನ್ನು ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮನಸೋ ಇಚ್ಛೆ ರಾಡ್​ನಿಂದ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Oct 20, 2021, 12:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.