ತುಮಕೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ(rape on minor) ಎಸಗಿದ್ದ ಆರೋಪಿಗೆ ತುಮಕೂರಿನ ಪೋಕ್ಸೋ ನ್ಯಾಯಾಲಯ (tumkur pocso court) ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.
15 ವರ್ಷದ ಬಾಲಕಿಯನ್ನು ಆರೋಪಿ ಅಪಹರಿಸಿ ಅತ್ಯಾಚಾರವೆಸಗಿದ್ದನು(tumkur rape case). ಆರೋಪ ಸಾಬೀತಾದ ಹಿನ್ನೆಲೆ, ಅಪರಾಧಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ 2019ರಲ್ಲಿ ಈ ಘಟನೆ ನಡೆದಿತ್ತು. ಮಂಜುನಾಥ ಎಂಬಾತ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಎಸಗಿದ್ದನು. ಈ ಬಗ್ಗೆ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ನಡುರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ.. ಹಳೆ ವೈಷಮ್ಯದಿಂದಾಗಿಯೇ ಕೊಲೆ ಶಂಕೆ
ಈ ಸಂಬಂಧ ವಿಚಾರಣೆ ನಡೆಸಿದ್ದ ತುಮಕೂರು ಪೋಕ್ಸೋ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶ ಕೃಷ್ಣಯ್ಯ ಆದೇಶ ನೀಡಿದ್ದು, ಸರ್ಕಾರಿ ವಕೀಲೆ ಬಿವಿ ಗಾಯತ್ರಿ ರಾಜು ವಾದ ಮಂಡಿಸಿದ್ದರು.