ತುಮಕೂರು: ಮುಂಬೈನಿಂದ ತುಮಕೂರಿಗೆ ಬಂದಿದ್ದ ಆರು ಮಂದಿಯಲ್ಲಿ ನಾಲ್ವರಲ್ಲಿ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15ಕ್ಕೇರಿದೆ.
ಇಬ್ಬರು ಮಹಿಳೆಯರು, ಮಕ್ಕಳಿಬ್ಬರು ಸೋಂಕಿಗೆ ಒಳಗಾಗಿದ್ದಾರೆ. ಮಹಾರಾಷ್ಟ್ರದಿಂದ ಬಂದ ಕೂಡಲೇ ಅವರನ್ನು ಕ್ವಾರಂಟೈನ್ ಮಾಡಲಾಗಿತ್ತು. ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು.
ನೇರವಾಗಿ ಕ್ವಾರಂಟೈನ್ ಮಾಡಿದ್ದರಿಂದ ಪ್ರಾಥಮಿಕ ಸಂಪರ್ಕಿತರು ಕಂಡು ಬಂದಿಲ್ಲ. ಒಂದು ವೇಳೆ ಅವರು ಬರುವ ಮಾರ್ಗ ಮಧ್ಯೆ ವಾಹನ ನಿಲುಗಡೆ ಗೊಳಿಸಿದ್ದರೆ, ಇಲ್ಲವೇ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ. ಇನ್ನು ಜಿಲ್ಲೆಯಲ್ಲಿ 8 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.