ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ವೇಳೆ ನೂರಾರು ಯೋಗಪಟುಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚೆನ್ನಬಸಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ವೀರಭದ್ರಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೂಡ ಸಾರ್ವಜನಿಕರೊಂದಿಗೆ ಕುಳಿತು ಯೋಗಾಸನ ಮಾಡಿದರು.