ತುಮಕೂರು: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರಿಗೆ ಸೇರಿದ ತುಮಕೂರು ನಗರದಲ್ಲಿರುವ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಮತ್ತು ಮೆಡಿಕಲ್ ಕಾಲೇಜಿನಲ್ಲಿ ರಾತ್ರಿ 10 ಗಂಟೆಯವರೆಗೂ ಐಟಿ ಇಲಾಖೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದರು.
ಬೆಳಗ್ಗೆ 7 ಗಂಟೆಯಿಂದಲೇ ನಿರಂತರವಾಗಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕಾಲೇಜಿನ ಲೆಕ್ಕಪತ್ರ ವಿಭಾಗ, ಸಿಬ್ಬಂದಿ ವಿಚಾರಣೆ ನಡೆಸಿದರು. ಅಲ್ಲದೆ ಕಾಲೇಜಿನ ಕೆಲವು ಸಿಬ್ಬಂದಿ ಸಂಜೆ 5 ಗಂಟೆಯವರೆಗೆ ಹೊರಗೆ ಹೋಗದಂತೆ ಸೂಚಿಸಿದ್ದರು. ಮಧ್ಯಾಹ್ನ ದಲಿತ ಸೇನೆ ಕಾರ್ಯಕರ್ತರು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದ್ದ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮತ್ತು ಡಿಎಆರ್ ಪೊಲೀಸ್ ಸಿಬ್ಬಂದಿ ಮತ್ತು ಸಬ್ ಇನ್ಸ್ಪೆಕ್ಟರ್, ಡಿವೈಎಸ್ಪಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.