ETV Bharat / city

ಸರ್ಕಾರಕ್ಕಿಂತ ದಾನಿಗಳು ಹೆಚ್ಚು ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿದ್ದಾರೆ: ಶಾಸಕ ಜಮೀರ್ ಅಹಮದ್ - ತುಮಕೂರು ಜಮೀರ್ ಅಹಮದ್ ಖಾನ್

ಸಂಬಂಧಿಕರೇ ಶವಗಳನ್ನು ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ, ಕೆಲವೆಡೆ ಮುಸ್ಲಿಂ ಯುವಕರು ಮುಂದೆ ಬಂದು ಅಂತ್ಯ ಸಂಸ್ಕಾರ ನಡೆಸುತ್ತಿದ್ದಾರೆ. ಸಂಕಷ್ಟದಲ್ಲಿರುವವರ ಜತೆಗೆ ನಿಲ್ಲುತ್ತಿದ್ದಾರೆ..

jamir ahmad
jamir ahmad
author img

By

Published : May 25, 2021, 7:04 PM IST

Updated : May 25, 2021, 10:55 PM IST

ತುಮಕೂರು : ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತಹ ಸರ್ಕಾರ ಮಾಡಬೇಕಾದ ಕೆಲಸಗಳನ್ನು ಯುವಕರು ಮತ್ತು ಖಾಸಗಿಯವರು ಮಾಡುತ್ತಿದ್ದಾರೆ ಎಂದು ಶಾಸಕ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ತುಮಕೂರಿನ ಸದಾಶಿವ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆ್ಯಂಬುಲೆನ್ಸ್​ಗಳು ಹಾಗೂ ಆಕ್ಸಿಜನ್ ಸಿಲಿಂಡರ್​ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ ದಾನಿಗಳು ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಸೋಂಕಿತರಿಗೆ ನೆರವಾಗುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರಕ್ಕಿಂತ ದಾನಿಗಳು ಹೆಚ್ಚು ವೈದ್ಯಕೀಯ ಸೌಲಭ್ಯ ಕಲ್ಪಿಸುತ್ತಿದ್ದಾರೆ: ಶಾಸಕ ಜಮೀರ್ ಅಹಮದ್

ಹೀಗಾಗಿ, ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅಲ್ಲದೆ ಶವಗಳನ್ನು ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಈ ಸಂದರ್ಭದಲ್ಲಿ ಕೆಲವೆಡೆ ಮುಸ್ಲಿಂ ಯುವಕರು ಮುಂದೆ ಬಂದು ಕೆಲಸ ಮಾಡುತ್ತಿದ್ದಾರೆ ಎಂದರು.

Last Updated : May 25, 2021, 10:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.