ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಅನಗತ್ಯವಾಗಿ ಸಂಚರಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಲಾಕ್ಡೌನ್ ನಡುವೆಯೂ ಅನಾವಶ್ಯಕವಾಗಿ ನಗರದಲ್ಲಿ ಓಡಾಡುತ್ತಿದ್ದ ಇಬ್ಬರು ಬೈಕ್ ಸವಾರರನ್ನು ಸ್ವತಃ ಎಸ್ಪಿ ಡ್ರೋನ್ ಕ್ಯಾಮರಾ ಮೂಲಕ ಪತ್ತೆ ಹಚ್ಚಿದರು. ಸೆರೆಯಾದ ದೃಶ್ಯಾವಳಿ ಆಧರಿಸಿ ಎರಡು ದ್ವಿಚಕ್ರ ವಾಹನಗಳನ್ನು ವಶಕ್ಕೆ ತೆಗೆದಕೊಳ್ಳಲಾಗಿದೆ.