ETV Bharat / city

ಪ್ರೇಮ ವೈಫಲ್ಯ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು - Lovers committed suicide in tumkur

ಕುಟುಂಬಸ್ಥರು ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯ ಮಾರುತಿನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
author img

By

Published : Feb 10, 2021, 3:59 PM IST

ತುಮಕೂರು: ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯ ಮಾರುತಿನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ದೀಕ್ಷಿತ್ ಹಾಗೂ ಪಂಚಾಕ್ಷರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಂಗಳೂರಿನ ಪಿ.ದಾಸರಹಳ್ಳಿಯಲ್ಲಿರುವ ಖಾಸಗಿ ಕಂಪನಿಯಲ್ಲಿ ದೀಕ್ಷಿತ್ ಕೆಲಸ ಮಾಡುತ್ತಿದ್ದನು. ಈತ ತುಮಕೂರಿನ ಪಂಚಾಕ್ಷರಿ ಎಂಬ ಯುವತಿಯನ್ನು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ. ಇವರಿಬ್ಬರು ಮದುವೆಯಾಗಲು ನಿರ್ಧರಿಸಿದ್ದು, ಇದಕ್ಕೆ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಯುವಕ ಮನೆಯಲ್ಲಿ ತನ್ನ ಪ್ರೀತಿಯ ವಿಷಯವನ್ನು ತಿಳಿಸಿದ್ದು, ಇದಕ್ಕೆ ಕುಟುಂಬಸ್ಥರು ಒಪ್ಪದ ಕಾರಣ ಕಳೆದ ಫೆ.7 ರಂದು ಆತ್ಮಹತ್ಯೆ ಮಾಡಿಕೊಂಡಿದ್ದನು. ಪ್ರಿಯತಮನ ಸಾವಿನ ಸುದ್ದಿ ಕೇಳಿದ ಯುವತಿ ಮೂರು ದಿನಗಳ ನಂತರ ಮನನೊಂದು ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಯುವತಿಯ ಪೋಷಕರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸುತ್ತಿದ್ದಾರೆ.

ಫೆಬ್ರವರಿ 7 ರಂದು ಯುವಕ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದನು. ಆನಂತರ ಯುವತಿಯೂ ಕೂಡ ವಿಷ ಕುಡಿದು ಚೇತರಿಸಿಕೊಂಡಿದ್ದಳು. ಇದೀಗ ಅಂತಿಮವಾಗಿ ಪ್ರೇಮಿಯ ಅಗ್ನಿಸ್ಪರ್ಶ ಮಾಡಿದ ಸಮೀಪದಲ್ಲೇ ಇರುವ ಅಂಗಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.