ತುಮಕೂರು : ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿದ್ದನ್ನು ತಡೆದಿದ್ದಕ್ಕೆ ವ್ಯಕ್ತಿಯೊಬ್ಬ ಹೈಟೆನ್ಷನ್ ಕಂಬ ಏರಿ ಕುಳಿತು ಆತ್ಮಹತ್ಯೆಗೆ ಮುಂದಾಗಿದ್ದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಡಗೂರು ಗ್ರಾಪಂ ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮನೆ ಕಟ್ಟಲು ಪಿಡಿಒ ಅಧಿಕಾರಿ ತಡೆ ಹಿಡಿದಿದ್ದರು. ಅಷ್ಟೇ ಅಲ್ಲ, ಮನೆ ಕಟ್ಟಲು ತಂದಿಟ್ಟಿದ್ದ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆತ್ಮಹತ್ಯೆಗೆ ಯತ್ನಿಸಿದ ಶ್ರೀನಿವಾಸ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಮುದ್ದೇಬಿಹಾಳ ಮಹಿಳಾ ಪಿಎಸ್ಐರದ್ದು ಎನ್ನಲಾದ ಆಡಿಯೋ ವೈರಲ್..
ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಸ್ಥಳೀಯರು ವ್ಯಕ್ತಿಯನ್ನು ಮನವೊಲಿಸಿ ವಿದ್ಯುತ್ ಕಂಬದಿಂದ ಕೆಳಗೆ ಇಳಿಸಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ