ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ನಡೆದಿದೆ.
ತಿಮ್ಲಾಪುರ ಗೊಲ್ಲರಟ್ಟಿ ಗ್ರಾಮದ ಸಿದ್ದಲಿಂಗಪ್ಪ 55 ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ತುಂಬಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.