ETV Bharat / city

ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಸೂಚನೆ - tumkur latest news

ಕುಡಿಯುವ ನೀರಿನ ಯೋಜನೆಗಳಾದ ಎರಡು ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿಯಬೇಕಿತ್ತು. ಆದರೆ, ಕೆಲವೊಂದು ಕಡೆ ರೈತರು ಜಮೀನು ಬಿಟ್ಟು ಕೊಡದೆ ಇರುವುದರಿಂದ ಯೋಜನೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

Minister J.C. Madhuswamy meeting with Hemavati Nala Engineers
ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ...ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ
author img

By

Published : Jun 29, 2020, 9:21 PM IST

ತುಮಕೂರು: ಜಿಲ್ಲೆಯ ಬಿಕ್ಕೆಗುಡ್ಡ ಹಾಗೂ ಹಾಗಲವಾಡಿ ಕುಡಿಯುವ ನೀರಿನ ಯೋಜನೆ ನಿರ್ಮಾಣಕ್ಕೆ ರೈತರು ತಮ್ಮ ಜಮೀನುಗಳನ್ನ ಬಿಟ್ಟು ಕೊಡುವಂತೆ ಅವರ ಮನವೊಲಿಸಬೇಕು. ಅಲ್ಲದೆ ಈ ಯೋಜನೆಯನ್ನ ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ಹೇಮಾವತಿ ನಾಲಾ ಎಂಜಿನಿಯರ್​ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಯೋಜನೆಗಳಾದ ಎರಡು ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿಯಬೇಕಿತ್ತು. ಆದರೆ, ಕೆಲವೊಂದು ಕಡೆ ರೈತರು ಜಮೀನು ಬಿಟ್ಟು ಕೊಡದೆ ಇರುವುದರಿಂದ ಯೋಜನೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.

ಈ ಯೋಜನೆಗಳಿಗೆ ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ನ್ಯಾಯಸಮ್ಮತ ಬೆಲೆ ನೀಡುವ ಭರವಸೆಯನ್ನು ರೈತರಿಗೆ ನೀಡಬೇಕು. ಭೂಮಿಯನ್ನು ನೀಡಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ನೀಡುವಂತೆ ಮನವರಿಕೆ ಮಾಡಬೇಕು ಎಂದು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.