ETV Bharat / city

ಐತಿಹಾಸಿಕ ದೇಗುಲಗಳಿಗೆ ಗಣಿಗಾರಿಕೆಯಿಂದ ಹಾನಿಯಾಗದಂತೆ ಕ್ರಮ: ಸಚಿವ ಪೂಜಾರಿ ಭರವಸೆ

author img

By

Published : Jan 23, 2021, 8:29 PM IST

2021ರ ಡಿಸೆಂಬರ್ ವೇಳೆಗೆ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಗುವುದು. ಇದಕ್ಕಾಗಿ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬಿದನಗೆರೆ ಶ್ರೀಬಸವೇಶ್ವರ ಮಠದ ಧನಂಜಯ ಗುರೂಜಿ ಹೇಳಿದರು.

Minister Kota Srinivasa Poojary
ಸಚಿವ ಕೋಟ ಶ್ರೀನಿವಾಸ ಪೂಜಾರಿ

ತುಮಕೂರು: ರಾಜ್ಯದ ಸುಮಾರು ಆರು ಕಡೆ ಗಣಿಗಾರಿಕೆಯಿಂದ ದೇಗುಲಗಳಿಗೆ ಹಾನಿಯಾಗುತ್ತದೆ ಎಂಬ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇದನ್ನೂ ಓದಿ...ಹುಣಸೋಡು ದುರಂತಕ್ಕೆ ಸಿಎಂ, ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆ: ಸಿದ್ದರಾಮಯ್ಯ

ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದರಕೆರೆ ಶನೇಶ್ವರ ದೇಗುಲದಲ್ಲಿ 161 ಅಡಿ ಎತ್ತರದ ಆಂಜನೇಯ ಸ್ವಾಮಿ ಮೂರ್ತಿಯ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಮುಜರಾಯಿ ದೇಗುಲಗಳಿಗೆ ಗಣಿಗಾರಿಕೆಯಿಂದ ಹಾನಿಯಾಗಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಅಲ್ಲದೆ ಐತಿಹಾಸಿಕ ದೇಗುಲಗಳ ಸಂರಕ್ಷಣೆಗೆ ಬದ್ಧ ಎಂದ ಅವರು, ಗಣಿಗಾರಿಕೆಯಿಂದ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಮಾತನಾಡಿ, ಕ್ಷೇತ್ರದಲ್ಲಿ ಸುಮಾರು 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ಮೂರ್ತಿ ಸ್ಥಾಪನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.