ತುಮಕೂರು: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಕಚೇರಿಯ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಧುಸ್ವಾಮಿ ಪರಿಶೀಲನೆ ನಡೆಸಿದರು.
ಫೆಬ್ರವರಿ 21ರಂದು ಕಚೇರಿಯ ಉದ್ಘಾಟನೆಯಾಗಲಿದ್ದು, ಕಾಮಗಾರಿಯ ಸ್ಥಿತಿಗತಿ ಬಗ್ಗೆ ಸಂಬಂಧಪಟ್ಟ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಹಳೆಯ ಆರ್ಎಸ್ಎಸ್ ಕಚೇರಿಯ ಕಟ್ಟಡವನ್ನು ನೆಲಸಮಗೊಳಿಸಿ ನೂತನ ಕಟ್ಟಡ ಕಾಮಗಾರಿ ಇತ್ತೀಚೆಗಷ್ಟೇ ಆರಂಭವಾಗಿತ್ತು.
ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಮತ್ತು ಮಾಜಿ ಶಾಸಕ ಶಿವಣ್ಣ ಹಾಗೂ ಆರ್ಎಸ್ಎಸ್ ಪ್ರಮುಖರು ಹಾಜರಿದ್ದರು.