ETV Bharat / city

ತುಮಕೂರು ಜಿಲ್ಲೆಯಲ್ಲಿ 21 ಜನರಿಗೆ ಬ್ಲಾಕ್ ಫಂಗಸ್: ಸಚಿವ ಮಾಧುಸ್ವಾಮಿ

author img

By

Published : May 25, 2021, 4:10 PM IST

ಜಿಲ್ಲೆಯಲ್ಲಿ 21 ಮಂದಿಯಲ್ಲಿ ಕಪ್ಪು ಶಿಲೀಂಧ್ರ ರೋಗ ಪತ್ತೆಯಾಗಿದೆ. ತುಮಕೂರು, ತುರುವೇಕೆರೆ, ಕುಣಿಗಲ್ ತಾಲೂಕಿನವರು ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 15 ಜನರಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡಲು ವಿಶೇಷ ವಾರ್ಡ್​ ವ್ಯವಸ್ಥೆ ಮಾಡಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಾಧುಸ್ವಾಮಿ ಹೇಳಿದರು.

minister-madhuswamy-talk-
ಸಚಿವ ಮಾಧುಸ್ವಾಮಿ

ತುಮಕೂರು: ಜಿಲ್ಲೆಯಲ್ಲಿ ಇದುವರೆಗೆ ಮೂವರು ಕಪ್ಪು ಶಿಲೀಂಧ್ರ ರೋಗಕ್ಕೆ ಬಲಿಯಾಗಿದ್ದು, ಇವರೆಲ್ಲರೂ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಹಂತದಲ್ಲಿ ಇದಕ್ಕೆ ಪೂರಕ ಚಿಕಿತ್ಸೆ ಜಿಲ್ಲೆಯಲ್ಲಿ ಲಭ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಮಾಧುಸ್ವಾಮಿ

ಓದಿ: ನಿವೃತ್ತಿಗೆ 5 ದಿನ ಇದ್ದಾಗ ಪಿಎಸ್ಐ ನಿಧನ.. ಇವರ ತಲೆ, ಕಣ್ಣಲ್ಲಿತ್ತು ವೀರಪ್ಪನ್ ಹಾರಿಸಿದ್ದ ಬುಲೆಟ್ಸ್..

ಜಿಲ್ಲೆಯಲ್ಲಿ 21 ಮಂದಿಯಲ್ಲಿ ಕಪ್ಪು ಶಿಲೀಂಧ್ರ ರೋಗ ಪತ್ತೆಯಾಗಿದೆ. ತುಮಕೂರು, ತುರುವೇಕೆರೆ, ಕುಣಿಗಲ್ ತಾಲೂಕಿನವರು ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 15 ಜನರಿಗೆ ಏಕಕಾಲದಲ್ಲಿ ಚಿಕಿತ್ಸೆ ನೀಡಲು ವಿಶೇಷ ವಾರ್ಡ್​ ವ್ಯವಸ್ಥೆ ಮಾಡಲಾಗಿದ್ದು, ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.

ಇದಲ್ಲದೆ ಸಿದ್ದಾರ್ಥ ಮತ್ತು ಶ್ರೀದೇವಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರತ್ಯೇಕ ವಾರ್ಡ್ ತೆರೆಯುವಂತೆ ಸೂಚನೆ ನೀಡಲಾಗಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಚಿಕಿತ್ಸೆ ನೀಡಲು ಶಕ್ತವಿದೆ ಮತ್ತು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು. ಈ ರೋಗಕ್ಕೆ ನೀಡಲಾಗುವ ಔಷಧಿಗಳು ಸಿಗುತ್ತಿಲ್ಲ ಎಂಬುದು ಸತ್ಯ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಿಗಳು ಸರಬರಾಜು ಆಗಿವೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.