ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಎನ್ ಅಚಮನಹಳ್ಳಿಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಶಾಲೆ ವಾಸ್ತವ್ಯ ಮಾಡಿದರು.
ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್, ಸುತ್ತಮುತ್ತಲ ತಿರುಮಣಿ ಗ್ರಾಮ ಸೇರಿದಂತೆ ವಿವಿಧ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಕ್ಕಳಿಂದಲೇ ಮಾಹಿತಿ ಪಡೆದರು. ಅಲ್ಲದೆ ಶಾಲಾ ಮಕ್ಕಳೊಂದಿಗೆ ಕುಳಿತು ಊಟ ಮಾಡಿ, ಮಕ್ಕಳೊಂದಿಗೆ ಶೈಕ್ಷಣಿಕ ವ್ಯವಸ್ಥೆ ಕುರಿತು ಇನ್ನಷ್ಟು ಮಾಹಿತಿಯನ್ನು ಪಡೆದರು.
ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಮಕ್ಕಳನ್ನು ದೃಷ್ಟಿಯಲ್ಲಿಟ್ಟುಕೊಂಡು ಶೈಕ್ಷಣಿಕ ವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ಗುರುತಿಸಲು ಈ ಪ್ರಯತ್ನವನ್ನು ನಡೆಸುತ್ತಿದ್ದೇನೆ. ಹಿಂದಿ ಭಾಷೆಯನ್ನು ಹೇರಬೇಕು ಎಂಬ ಉದ್ದೇಶವಲ್ಲ, ಆದರೆ ಕನ್ನಡವನ್ನು ಮೊದಲಿಗೆ ಬರೆಯಲು ಕಲಿಯಬೇಕು ಎಂದು ತಿಳಿಸಿದರು.