ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ತುಮಕೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಬ್ಯಾರಿಕೇಡ್ ಮೇಲೆ ಹತ್ತಿದ ಘಟನೆ ನಡೆದಿದೆ.
ಸ್ಥಳದಲ್ಲಿದ್ದ ಅಪಾರ ಸಂಖ್ಯೆಯ ಪೊಲೀಸರು ಅವರನ್ನು ಬಂಧಿಸಲು ಪ್ರಯತ್ನಿಸಿದರು. ಹೀಗಿದ್ದರೂ ಶ್ರೀನಿವಾಸ್ ಮೇಲೆ ನಿಂತು ನಂತರ ಪೊಲೀಸರ ಮೇಲೆ ಧುಮುಕಿದರು. ನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು. ಇವರೊಂದಿಗೆ ವಿಧಾನಪರಿಷತ್ ಸದಸ್ಯ ರಾಜೇಂದ್ರ ಕೂಡ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಇದು ಮಾದರಿ.. ಜಾತಿ-ಧರ್ಮವಿಲ್ಲದ ಸರ್ಟಿಫಿಕೇಟ್ ನೀಡಿ ಮಗಳನ್ನು ಶಾಲೆಗೆ ದಾಖಲಿಸಿದ ಪೋಷಕರು!