ತುಮಕೂರು: ಪದೇ ಪದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಪತ್ತೆಯಾದರೆ ಇನ್ಮುಂದೆ ಸಾರ್ವಜನಿಕವಾಗಿ ರೌಡಿಗಳ ಪರೇಡ್ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇಷ್ಟು ದಿನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ರೌಡಿಶೀಟರ್ಗಳ ಪರೇಡ್ ನಡೆಸಿ, ಅಪರಾಧ ಚುಟುವಟಿಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗುತ್ತಿತ್ತು. ಇದಕ್ಕೆ ಕ್ಯಾರೆ ಎನ್ನದ ರೌಡಿಗಳು, ಪುನಃ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ಹೀಗಾಗಿ, ಮಧುಗಿರಿ ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮಧುಗಿರಿ ಉಪವಿಭಾಗ ವ್ಯಾಪ್ತಿಯ ರೌಡಿಶೀಟರ್ಗಳು ಮತ್ತು ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರ ಪರೇಡ್ ನಡೆಸಿದ ಎಸ್ಪಿ ರಾಹುಲ್ ಕುಮಾರ್, ಇನ್ಮುಂದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಗೊತ್ತಾದರೆ ಸಾರ್ವಜನಿಕರ ಮುಂದೆ ಪರೇಡ್ ನಡೆಸಲಾಗುವುದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ಜೊತೆಗೆ ಮುಂದಿನ ಬಾರಿ ರೌಡಿಗಳ ಪರೇಡ್ ನಡೆಸುವ ಸಂದರ್ಭದಲ್ಲಿ ಸಾರ್ವಜನಿಕರು ನೆರೆದಿರಬೇಕು. ಈ ಕುರಿತು ಸಾರ್ವಜನಿಕರ ಭಾಗವಹಿಸುವಿಕೆಗೆ ಪ್ರಚಾರ ಮಾಡಬೇಕು ಎಂದು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ, ಆಯಾ ತಾಲೂಕು ಕೇಂದ್ರಗಳಲ್ಲಿ ರೌಡಿಗಳು, ಮಟ್ಕಾ ಹಾಗೂ ಜೂಜಾಟ ಪರೇಡ್ ನಡೆಸಲು ಸೂಚಿಸಿದ್ದರು.
ಇದನ್ನೂ ಓದಿ: ಕೃಷ್ಣಾ ನದಿಗೆ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ಪ್ರಸಿದ್ಧ ಅಲ್ಲಮಪ್ರಭುಲಿಂಗೇಶ್ವರ ದೇಗುಲ ಜಲಾವೃತ