ತುಮಕೂರು: 2001 ರಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಮಹಿಳೆಯರ ಆತ್ಮರಕ್ಷಣೆ ಹೆಚ್ಚಿಸುವ ನಿಟ್ಟಿನಲ್ಲಿ ಸಾಂತ್ವನ ಕೇಂದ್ರಗಳನ್ನು ಹಾಗೂ ಮಾತೃಶ್ರೀ ಯೋಜನೆಯನ್ನು ಜಾರಿಗೊಳಿಸಿತ್ತು. ಆದರೆ, ಈಗಿನ ಬಿಜೆಪಿ ಸರ್ಕಾರ ಈ ಎರಡು ಯೋಜನೆಗಳನ್ನು ನಿಲ್ಲಿಸಿದೆ ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಕೂಡಲೇ ಸಂಬಳ ನೀಡಬೇಕು ಎಂದು ಆಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು ಅವರಿಗೆ ಮುರಳೀಧರ ಹಾಲಪ್ಪ ಮನವಿ ಸಲ್ಲಿಸಿ ಸರ್ಕಾರಕ್ಕೆ ಒತ್ತಾಯಿಸಿದರು.
ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಮಾತನಾಡಿ, ಕಾಂಗ್ರೆಸ್ ಜಾರಿಗೆ ತಂದಿದ್ದ ಈ ಎರಡು ಯೋಜನೆಗಳನ್ನು ನಿಲ್ಲಿಸಿ, ಮದ್ಯದ ಅಂಗಡಿಗಳನ್ನು ತೆರೆಯಲು ಬಿಜೆಪಿ ಸರ್ಕಾರ ಅವಕಾಶ ನೀಡಿದೆ ಎಂದರು.
ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯ ನಿರ್ದೇಶಕರನ್ನು ಕೇಳಿದಾಗ ಈ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಹಣವಿಲ್ಲ ಎಂಬ ಒಂದು ಕಾರಣ ನೀಡಿ ನಿಲ್ಲಿಸುವುದಾಗಿ ಹೇಳಿತ್ತು ಎಂದು ತಿಳಿಸಿದರು.
ರಾಜ್ಯದ 196 ಸಾಂತ್ವನ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನ ನೀಡಿಲ್ಲ. ಅವರಿಗೆ ವೇತನ ಬಿಡುಗಡೆ ಮಾಡಬೇಕು ಎಂದು ಸರ್ಕಾರದ ವಿರದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಿರ್ಮಿತಿ ಕೇಂದ್ರ, ಮಾತೃಶ್ರೀ ಯೋಜನೆ, ಸಾಂತ್ವನ ಕೇಂದ್ರ, ನಿರ್ಭಯ ಕೇಂದ್ರಗಳನ್ನು ಮತ್ತೆ ಆರಂಭಿಸಬೇಕು ಎಂದು ಒತ್ತಾಯಿಸಿದರು.