ETV Bharat / city

2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಜ್ಞಾ ಪಂಚಾಯತ್ ಅಭಿಯಾನ: ಶ್ರೀ ಜಯಮೃತ್ಯುಂಜಯ ಸ್ವಾಮೀಜಿ - ಮೀಸಲಾತಿ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ವಿಚಾರವನ್ನು ಸರ್ಕಾರಕ್ಕೆ ನೆನಪಿಸಲು ಮತ್ತು ಸರ್ಕಾರ ಎಚ್ಚರಗೊಳಿಸಲು ಆಗಸ್ಟ್ 26ರಿಂದ ಪ್ರತಿಜ್ಞಾ ಪಂಚಾಯತ್ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

Pratignya Panchayat campaign with demanding 2A reservation for ligayuta community
2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಜ್ಞಾ ಪಂಚಾಯತ್ ಅಭಿಯಾನ
author img

By

Published : Sep 29, 2021, 6:40 AM IST

ತುಮಕೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ಈಗಾಗಲೇ ನಿರಂತರ ಪಾದಯಾತ್ರೆ, ಹೋರಾಟ ನಡೆಸಲಾಗಿದೆ. ವಿಧಾನಸಭೆಯಲ್ಲಿ ಪ್ರಸ್ತಾಪವಾದ ನಂತರ ಸೆಪ್ಟೆಂಬರ್ 15ರೊಳಗೆ ನೆರವೇರಿಸಲಾಗುವುದು ಎಂದು ಸರ್ಕಾರ ಮಾತು ಕೊಟ್ಟಿತ್ತು. ಆದರೆ ಈವರೆಗೂ ಅದು ಜಾರಿಗೆ ಬಂದಿಲ್ಲ. ಹೀಗಾಗಿ ಸರ್ಕಾರದ ಮಾತನ್ನು ನೆನಪಿಸಲು ಮತ್ತು ಸರ್ಕಾರವನ್ನು ಎಚ್ಚರಗೊಳಿಸಲು ಆಗಸ್ಟ್ 26ರಿಂದ ಪ್ರತಿಜ್ಞಾ ಪಂಚಾಯತ್ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಅಭಿಯಾನ ಕುರಿತು ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ

ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಸಿದ್ದಲಿಂಗಸ್ವಾಮಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ನಂತರ ಮಾತನಾಡಿದರು. ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಚರ್ಚೆ ನಡೆಸಲಾಗಿದೆ. ಹೋರಾಟಕ್ಕೆ ಚೈತನ್ಯ ತುಂಬಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಮೂರು ದಿನಗಳಿಂದ ಸಂಪರ್ಕದಲ್ಲಿದ್ದಾರೆ. ಸಚಿವ ಸಿಸಿ ಪಾಟೀಲ್ ಸಹ ಹೇಳಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸತ್ಯಾಗ್ರಹ ಮುಂದುವರೆಸಬೇಡಿ ಎಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಕೂಡಲ ಸಂಗಮ ಪಂಚಮಸಾಲಿ ಪೀಠ ಆಸ್ತಿ ವಿವಾದಕ್ಕೆ ಬಿಗ್ ಟ್ವಿಸ್ಟ್; ಮಠದ ಆಸ್ತಿ ಮೇಲೆ ಶ್ರೀಗಳ ಕಣ್ಣು!

ಅಕ್ಟೋಬರ್ 1ರಿಂದ ಬೆಂಗಳೂರಿನಲ್ಲಿ ಸತ್ಯಾಗ್ರಹ ಆರಂಭಿಸಲಾಗುವುದು. ಅದರೊಳಗೆ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.