ETV Bharat / city

ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ತುಮಕೂರು ಜಿಲ್ಲಾಡಳಿತದಿಂದ ಸಿದ್ಧತೆ

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಸಹಕಾರ ನೀಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಖಾಸಗಿ ಬಸ್​ ಮತ್ತು ಮ್ಯಾಕ್ಸಿ ಕ್ಯಾಬ್​ ಮಾಲೀಕರಿಗೆ ಸೂಚಿಸಿದರು.

Transportation Employees Strike
ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ತುಮಕೂರು ಜಿಲ್ಲಾಡಳಿತದಿಂದ ಸಿದ್ಧತೆ
author img

By

Published : Apr 6, 2021, 7:43 PM IST

ತುಮಕೂರು: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಕಲ್ಪಿಸುವ ಸಂಬಂಧ ಎಸ್​ಪಿ ಕಚೇರಿಯಲ್ಲಿ ಖಾಸಗಿ ಬಸ್​ ಮತ್ತು ಮ್ಯಾಕ್ಸಿ ಕ್ಯಾಬ್​ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಭೆ ನಡೆಸಿದರು.

ಸಾರಿಗೆ ನೌಕರರ ಮುಷ್ಕರ: ಪರ್ಯಾಯ ವ್ಯವಸ್ಥೆಗೆ ತುಮಕೂರು ಜಿಲ್ಲಾಡಳಿತದಿಂದ ಸಿದ್ಧತೆ

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಸಹಕಾರ ನೀಡಬೇಕು. ಅಧಿಕ ಬಾಡಿಗೆ ದರ ವಸೂಲಿ ಮಾಡಬಾರದು. ವಯೋವೃದ್ಧರು ಹಾಗೂ ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಸಹಕಾರಿಯಾಗುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ,ಆರ್​ಟಿಒ ರಾಜು ಮತ್ತಿತರರು ಹಾಜರಿದ್ದರು.

ಓದಿ: ಸಾರಿಗೆ ನೌಕರರು ಕರೆ ನೀಡಿರುವ ಮುಷ್ಕರಕ್ಕೆ ಯಾದಗಿರಿಯಲ್ಲಿ ಇಂದಿನಿಂದಲೇ ಬೆಂಬಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.