ETV Bharat / city

ಕೋಳಘಟ್ಟ ಗ್ರಾಮದ ಜನರಿಗೆ ತಲೆನೋವಾದ ತುಮಕೂರು ಶಿವಮೊಗ್ಗ ಹೆದ್ದಾರಿ ಕಾಮಗಾರಿ

author img

By

Published : Apr 26, 2022, 10:14 PM IST

ತುಮಕೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮದ ಜನರಿಗೆ ತಲೆನೋವಾಗಿ ಪರಿಣಮಿಸಿದೆ.

embarrassment of villagers due to National Highway Construction Crusher
ಕೋಳಘಟ್ಟ ಗ್ರಾಮದ ಜನರಿಗೆ ತಲೆನೋವಾದ ತುಮಕೂರು ಶಿವಮೊಗ್ಗ ಹೆದ್ದಾರಿ ಕಾಮಗಾರಿ

ತುಮಕೂರು: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕೋಳಘಟ್ಟ ಗ್ರಾಮದ ಜನ ಕಳೆದ ಮೂರ್ನಾಲ್ಕು ತಿಂಗಳಿಂದ ನೆಮ್ಮದಿ ಕಳೆದುಕೊಂಡಿದ್ದಾರೆ. ತುಮಕೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗ್ರಾಮಸ್ಥರ ನೆಮ್ಮದಿ ಕೆಡಿಸಿದೆ. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೋಳಘಟ್ಟ ಗ್ರಾಮದಲ್ಲಿದ್ದ ಗೋಮಾಳದ 10 ಎಕರೆ ಭೂಮಿಯಲ್ಲಿ ಕಲ್ಲು ಗಣಿಗಾರಿಕೆಗೆ ಸರ್ಕಾರ ರಾಜುಗೌಡ ಎಂಬಾತನಿಗೆ ಪರ್ಮಿಷನ್ ನೀಡಿದೆ.

ಪರವಾನಗಿ ಪಡೆದ ಮಾಲೀಕ ರಾಜುಗೌಡ ಸರ್ಕಾರ ನಿಯಮಗಳನ್ನು ಗಾಳಿಗೆ ತೂರಿ ಕ್ರಷರ್ ನಡೆಸುತ್ತಿದ್ದಾರೆ ಎನ್ನುವ ಗಂಭಿರ ಆರೋಪ ಕೇಳಿ ಬಂದಿದೆ. ಇದರಿಂದ ಗ್ರಾಮದಲ್ಲಿ ಮನೆಗಳು ಹಾಗೂ ದೇವಸ್ಥಾನದ ಗೋಡೆಗಳು ಬಿರುಕು ಬಿಟ್ಟಿವೆ. ಹಗಲು ರಾತ್ರಿ ಎನ್ನದೇ ಗ್ರಾಮಸ್ಥರು ಜೀವಭಯದಿಂದ ಬದುಕು ನಡೆಸುವಂತಾಗಿದೆ. 20ಕ್ಕೂ ಹೆಚ್ಚು ಜಾನುವಾರುಗಳು ಕ್ರಷರ್ ಸ್ಪೋಟದ ಶಬ್ದಕ್ಕೆ ಸಾವನ್ನಪ್ಪಿವೆ. ಅಲ್ಲದೆ ಕೊಳವೆ ಬಾವಿಗಳಲ್ಲಿ ಕಲುಷಿತ ನೀರು ಬರುತ್ತಿದ್ದು ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ.

ಕ್ರಷರ್​ ಬಳಿ ಸತತ ಎರಡು ತಿಂಗಳಿಂದ ಗ್ರಾಮಸ್ಥರು ಅಹೋರಾತ್ರಿ ಧರಣಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ತುರುವೇಕೆರೆ ತಾಲೂಕು ಕಚೇರಿಯವರೆಗೂ ಕಾಲ್ನಡಿಗೆ ನಡೆದು ತಾಲ್ಲೂಕು ಕಛೇರಿಯ ಎದುರೇ ಉಪವಾಸ ಸತ್ಯಾಗ್ರಹ ಮಾಡಿದ್ದರು. ಇದರಿಂದ ಎಚ್ಚೆತ್ತ ಜಿಲ್ಲಾಡಳಿತ ತಾತ್ಕಾಲಿಕವಾಗಿ ಕಲ್ಲು ಗಣಿಗಾರಿಕೆ ಬ್ರೇಕ್ ಹಾಕಿತ್ತು. 10 ದಿನಗಳಿಂದ ಪೊಲೀಸ್ ಬಿಗಿಭದ್ರತೆಯಲ್ಲಿ ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್ ಪುನಾರಂಭವಾಗಿದೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಕ್ರಷರ್ ಬಳಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರನ್ನು ಪೊಲೀಸರು ಬಂಧಿಸುವುದಾಗಿ ಹೇಳಿದ್ದಾರೆ.

ಗ್ರಾಮಸ್ಥರ ವಿರೋಧದ ನಡುವೆಯೂ ಮತ್ತೆ ಕ್ರಷರ್ ತೆರೆದಿದ್ದು ಜಿಲ್ಲಾಡಳಿತ ಹಾಗೂ ಪೊಲೀಸರ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಎಷ್ಟೇ ಹೋರಾಟ ಸತ್ಯಾಗ್ರಹ ನಡೆಸಿದರೂ ಬಂಡೆ ಒಡೆಯುವ ಕಾಯಕ ಮಾತ್ರ ನಿಂತಿಲ್ಲ. ಜಿಲ್ಲಾಡಳಿತ ಅಥವಾ ಸರ್ಕಾರ ಈ ಕೂಡಲೇ ಇತ್ತ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ರೈಲಿನಡಿ ಸಿಲುಕಿದ ವ್ಯಕ್ತಿಯ ಪ್ರಾಣ ಉಳಿಸಿದ ಪೊಲೀಸ್: ಸಿಸಿಟಿವಿಯಲ್ಲಿ ಘಟನೆ ಸೆರೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.