ETV Bharat / city

ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆ ಎದುರು ಪ್ರತಿಭಟನೆ

ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ತುಮಕೂರು ನಿವಾಸದೆದುರು ಎನ್​ಎಸ್​ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನೆಯನ್ನು ಚದುರಿಸಿದ ಘಟನೆ ನಡೆದಿದೆ.

Protest in front of Education Ministers house in Tumakuru
ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆಗೆ ಎದುರು ಪ್ರತಿಭಟನೆ
author img

By

Published : Jun 1, 2022, 5:34 PM IST

Updated : Jun 1, 2022, 10:11 PM IST

ತುಮಕೂರು: ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದಾರೆ. ಅದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಎನ್​ಎಸ್​ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ. ಎನ್​ಎಸ್​ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಸಚಿವ ನಾಗೇಶ್ ಮನೆ ಎದುರು ಜಮಾಯಿಸಿದ್ದರು.

ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆಗೆ ಎದುರು ಪ್ರತಿಭಟನೆ

ಹತ್ತು ನಿಮಿಷಗಳ ಕಾಲ ನಾಗೇಶ್ ಅವರ ಮನೆ ಎದುರು ಘೋಷಣೆ ಕೂಗುತ್ತಿದ್ದರು, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅವರನ್ನು ಚದುರಿಸಿದರು. ಈ ನಡುವೆ ಪೊಲೀಸರು ಹಾಗೂ ಎನ್​ಎಸ್​ಯುಐ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ: ಪಠ್ಯದಿಂದ ಅಧ್ಯಾಯ ಕೈಬಿಡಿ ಎನ್ನುವುದು ಕಾಂಗ್ರೆಸ್‌ನಿಂದ ಉಪಕೃತರಾದ ಕೆಲವರ ನಾಟಕ: ಪ್ರತಾಪ್​ ಸಿಂಹ

Last Updated : Jun 1, 2022, 10:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.