ETV Bharat / city

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ: ಸಂಬಂಧಿಕರಿಂದ ಆಸ್ಪತ್ರೆಯ ಪೀಠೋಪಕರಣ ಧ್ವಂಸ

author img

By

Published : Oct 18, 2021, 1:34 PM IST

ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಕೆಯ ಸಂಬಂಧಿಕರು ಆಸ್ಪತ್ರೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

nursing mother dies in Tumkur
nursing mother dies in Tumkur

ತುಮಕೂರು: ಚಿಕಿತ್ಸೆ ಫಲಕಾರಿಯಾಗದೆ ಬಾಣಂತಿ ಮೃತಪಟ್ಟಿದ್ದು, ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಸಂಬಂಧಿಕರು ಖಾಸಗಿ ಆಸ್ಪತ್ರೆಯಲ್ಲಿ ಗಲಾಟೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದಿದೆ.

ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಬಳಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಹೇಮಲತಾ ಮೃತಪಟ್ಟಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಪುತ್ತೂರಲ್ಲಿ ಹೊಸಬಟ್ಟೆ ಧರಿಸಿ ರೈತ ದಂಪತಿ ಆತ್ಮಹತ್ಯೆ.. ಕಾರಣ ನಿಗೂಢ!

ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮೃತ ಹೇಮಲತಾ ಸಂಬಂಧಿಕರು ಆಸ್ಪತ್ರೆಯ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಇದ್ದರೂ ಕೂಡ ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದರು. ಓರ್ವ ಪೊಲೀಸ್​ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸುವ ಬದಲು ಮೊಬೈಲ್​ದಲ್ಲಿ ಘಟನೆಯ ದೃಶ್ಯ ಸೆರೆಹಿಡಿಯುತ್ತಾ ಇರುವುದು ಕಂಡು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.