ತುಮಕೂರು: ಇತ್ತೀಚೆಗೆ ನಿಧನರಾದ ಶಾಸಕ ಸತ್ಯನಾರಾಯಣ ಅವರಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸಾಕಷ್ಟು ಬಿರುಸು ಕಂಡಿದೆ.
ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಅವರನ್ನು ಜಿಲ್ಲಾ ಜೆಡಿಎಸ್ ಮುಖಂಡ ಆಂಜನಪ್ಪ ದಿಢೀರ್ ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. ಅಲ್ಲದೆ ಪಾವಗಡ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ತಿಮ್ಮರಾಯಪ್ಪ ಸಹ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಇನ್ನೊಂದೆಡೆ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿ ಎಂದು ಈಗಾಗಲೇ ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಹೇಳಿಕೆ ನೀಡಿರುವುದು ಇದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ ಎಂದು ಹೇಳಬಹುದಾಗಿದೆ.